ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆಮಾಧವ ಗೌಡ ಹಿರೆಬಂಡಾಡಿ ರಾಜಿನಾಮೆ
ಉಪ್ಪಿನಂಗಡಿ: ಬಿಜೆಪಿ ದುರೀಣ, ಉಪ್ಪಿನಂಗಡಿ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ, ಪುತ್ತೂರು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮಾಧವ ಗೌಡ ಹಿರೆಬಂಡಾಡಿ ಬಿಜೆಪಿ ನಾಯಕರ ನಿರ್ಲಕ್ಷ್ಯ ಧೋರಣೆಯನ್ನು ಪ್ರತಿಭಟಿಸಿ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ, ಸಿ.ಎ. ಬ್ಯಾಂಕ್ ನಿರ್ದೇಶಕತ್ವಕ್ಕೆ ಹಾಗೂ ಉಪಾಧ್ಯಕ್ಷತೆಗೆ ರಾಜಿನಾಮೆ ಸಲ್ಲಿಸಿದ್ದಾರೆ.
1980 ರಿಂದಲೇ ಬಿಜೆಪಿಯ ಕಾರ್ಯಕರ್ತನಾಗಿ ದುಡಿದಿದ್ದ ನಾನು, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಾರ್ಯಕರ್ತರ ಯಾವೊಂದು ಬೇಡಿಕೆಗೂ ನ್ಯಾಯ ಒದಗಿಸಲು ಅಸಮರ್ಥನಾಗುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ
ಜನಪ್ರತಿನಿಧಿಗಳು, ಕಾರ್ಯಕರ್ತರ ಬೇಡಿಕೆಗಳನ್ನು ಕೇಳಿಸಿಕೊಳ್ಳಲೂ ವ್ಯವಧಾನ ತೋರದೆ ಅಹಂಕಾರ, ದರ್ಪ ಪ್ರದರ್ಶಿಸುತ್ತಿದ್ದಾರೆ. ಕಾರ್ಯಕರ್ತರಿಂದಾಗಿ ತಾವು ಅಧಿಕಾರಕ್ಕೆ ಬಂದಿದ್ದೇವೆ ಎಂಬುವುದನ್ನು ಮರೆತು ನಿರ್ಲಕ್ಷ್ಯ ನೀತಿಯನ್ನು ಅನುಸರಿಸುತ್ತಿರುವುದರಿಂದ ಬೇಸತ್ತು ಪಕ್ಷ ತ್ಯಾಗ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಪಕ್ಷದಿಂದಾಗಿ ನನಗೆ ದೊರೆತ ಉಪ್ಪಿನಂಗಡಿ ಸಿ.ಎ. ಬ್ಯಾಂಕ್ ನಿರ್ದೇಶಕತ್ವಕ್ಕೂ ಹಾಗೂ ಬ್ಯಾಂಕಿನ ಉಪಾಧ್ಯಕ್ಷತೆಗೂ ರಾಜಿನಾಮೆ ಸಲ್ಲಿಸಿರುತ್ತೇನೆ ಎಂದು ಮಾಧವ ಗೌಡ ಪತ್ರಿಕೆಗೆ ತಿಳಿಸಿದ್ದಾರೆ.