ಸ್ವರ್ಣಾ ನದಿಯಲ್ಲಿ ವ್ಯಕ್ತಿ ಆತ್ಮಹತ್ಯೆ
ಬ್ರಹ್ಮಾವರ: ಇಲ್ಲಿನ ಕಕ್ಕುಂಜೆ ಗ್ರಾಮದ ನಿವಾಸಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಮೃತದೇಹ ಮಂಗಳವಾರ ಪತ್ತೆಯಾಗಿದೆ. ಬಿ. ಅನಂತಕೃಷ್ಣ (45) ಮೃತರು. ಬ್ಯಾಂಕ್ ಉದ್ಯೋಗಿಯಾಗಿರುವ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಭಾನುವಾರ ಕಲ್ಯಾಣಪುರ ಸೇತುವೆ ಮೇಲಿನಿಂದ ಸ್ವರ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಹಾವಂಜೆ ಗ್ರಾಮದ ಕಿಳಿಂಜೆ ಎಂಬಲ್ಲಿನ ಸ್ವರ್ಣಾ ನದಿಯಲ್ಲಿ ಸಿಕ್ಕಿದೆ. ಈ ಬಗ್ಗೆ ಬಿ. ರಮೇಶ್ ಅಡಿಗ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.