ಚಿತ್ರಕಲಾ ಪರೀಕ್ಷೆ: ಎಸ್‌ಡಿಎಂಗೆ ಶೇ. 100
ಬೆಳ್ತಂಗಡಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬೆಂಗಳೂರು ಇವರು ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಸಿ)ಯ ವಿದ್ಯಾರ್ಥಿಗಳು ಶೇ. 100 ಫಲಿತಾಂಶ ಪಡೆದುಕೊಂಡಿದ್ದಾರೆ. ಒಟ್ಟು 23 ವಿದ್ಯಾರ್ಥಿಗಳಲ್ಲಿ ಅಭಿರಾಮ್ 8ನೇ ತರಗತಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ. ಉಳಿದಂತೆ ಎಂಟು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.