ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಆದೇಶ ಉಲ್ಲಂಘಿಸಿ ಮಸೀದಿ ನಿರ್ಮಾಣ: ಹಿಂಜಾವೇ ಪ್ರತಿಭಟನೆ ನಿರ್ಧಾರ

Rashmi Kasaragodu
Updated On : 29 Mar 2013, 1:33 am

ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯಿತಿ ಆದೇಶ ಉಲ್ಲಂಘಿಸಿ ಕಟ್ಟಡ ಕಾಮಗಾರಿ ನಡೆಸುತ್ತಿರುವ ಆರೋಪ ಹೊತ್ತ ಮಿಸ್ಬಾ ಉಲ್ ಮಿಸ್ಬಾ ಉಲ್ ಉಲೂಮ್ ಮಸೀದಿ ಸಂಸ್ಥೆಯ ಕ್ರಮ ಖಂಡಿಸಿ ಏ.1ರಂದು ಗಂಗೊಳ್ಳಿ ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಗ್ರಾ.ಪಂ. ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಮಿಸ್ಬಾ ಉಲ್ ಉಲೂಮ್ ಮಸೀದಿ ಸಂಸ್ಥೆಯು ಗಂಗೊಳ್ಳಿ ಗ್ರಾಮದ ವಾರ್ಡ್ 1ರಲ್ಲಿ ಪಂಚಾಯಿತಿಯ ಅನುಮತಿ ಇಲ್ಲದೆ ಅನಧಿಕೃತವಾಗಿ ಮಸೀದಿ ನಿರ್ಮಾಣ ಮಾಡುತ್ತಿದ್ದು, ಈ ಬಗ್ಗೆ ಹಿಂದು ಜಾಗರಣ ವೇದಿಕೆ ಹಾಗೂ ಸ್ಥಳೀಯರು ಇದರ ವಿರುದ್ಧ ಆಕ್ಷೇಪಣೆ ಸಲ್ಲಿಸಿದ್ದಾರೆ.
ಈ ವಿಚಾರದಲ್ಲಿ ಮಸೀದಿ ನಿರ್ಮಾಣ ಸ್ಥಗಿತಗೊಳಿಸಲು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯಿಸಿದ್ದು, ಇತ್ತೀಚಿಗೆ ನಡೆದ ಗ್ರಾಮ ಸಭೆಯಲ್ಲಿ ಕಾನೂನು ಕ್ರಮಕೈಗೊಳ್ಳಲು ನಿರ್ಣಯ ಕೈಗೊಳ್ಳಲಾಗಿದೆ.
ಆದರೆ ಮಸೀದಿ ಸಂಸ್ಥೆಯು ಸ್ಥಳೀಯ ಗ್ರಾಮ ಪಂಚಾಯಿತಿ ನಿರ್ಣಯ ಧಿಕ್ಕರಿಸಿ, ಆದೇಶ ಉಲ್ಲಂಘಿಸಿ ಮಸೀದಿ ನಿರ್ಮಾಣವನ್ನು ಮುಂದುವರಿಸುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.
ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿ ಕೂಡ ಯಾವುದೇ ಕಾನೂನು ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಸ್ಥಳೀಯ ಪಂಚಾಯಿತಿಯ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮತ್ತು ಅನಧಿಕೃತವಾಗಿ ಮಸೀದಿ ನಿರ್ಮಾಣ ಮಾಡುತ್ತಿರುವುದರ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಗಂಗೊಳ್ಳಿ ಹಿಂಜಾವೇ ಸಂಚಾಲಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement