ಪಿಯುಸಿ ಹಿಂದಿ ಪರೀಕ್ಷೆಗೆ 106 ಮಂದಿ ಗೈರು
ಮಂಗಳೂರು: ಜಿಲ್ಲೆಯಲ್ಲಿ ಗುರುವಾರ ದ್ವಿತೀಯ ಪಿಯುಸಿ ಹಿಂದಿ ಪರೀಕ್ಷೆಯಲ್ಲಿ 106 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಹಿಂದಿ ಪರೀಕ್ಷೆಯಲ್ಲಿ ಒಟ್ಟು 8201 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 8095 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಸಂಸ್ಕೃತ ಪರೀಕ್ಷೆಯಲ್ಲಿ ಒಟ್ಟು 1600 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 1595 ಮಂದಿ ಪರೀಕ್ಷೆ ಬರೆದಿದ್ದಾರೆ. ಒಟ್ಟು 5 ಮಂದಿ ಗೈರಾಗಿದ್ದಾರೆ ಎಂದು ಪಿಯುಬೋರ್ಡ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.