ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಬಾಲಕ ಸಾವು

Vishwanath S
Updated On : 1 Apr 2013, 11:37 am

ದೇವದುರ್ಗ: ತಾಲೂಕಿನ ಯರಮರಸ ಗ್ರಾಮದಲ್ಲಿ ಬಾಲಕನೊಬ್ಬ ಡೆಂಘೀ ಜ್ವರದಿಂದ ಬಳಲಿ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಮೃತ ಬಾಲಕನನ್ನು ಗ್ರಾಮದ ಸಂತೋಷ(8) ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗೆಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಒತ್ತಾಯ: ತಾಲೂಕಿನಲ್ಲಿ ಡೆಂಘೀ ಜ್ವರದ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸೂಕ್ತ ಕ್ರಮ ಕೈಗೊಂಡು ರೋಗ ನಿಯಂತ್ರಣಕ್ಕೆ ಮುಂದಾಗಬೇಕೆಂದು ಹೈ.ಕ. ವಿಮೋಚನಾ ವೇದಿಕೆ ತಾಲೂಕು ಅಧ್ಯಕ್ಷ ರಾಮಣ, ಗಣೇಕಲ್ ಒತ್ತಾಯಿಸಿದ್ದಾರೆ.

ಲಘು ಭೂಕಂಪ
ಹಿರಿಯೂರು:
ತಾಲೂಕಿನ ಜವಗೊಂಡನಹಳ್ಳಿ ಹೋಬಳಿ ನಾಯಕರಕೊಟ್ಟಿಗೆ, ಯಲ್ಲದಕೆರೆ, ಶೀಗೆಹಟ್ಟಿ ಮತ್ತು ಪಟ್ಟಣದ ಹುಳಿಯಾರು ರಸ್ತೆಯ ಬಡಾವಣೆಗಳ ಕೆಲ ಮನೆಗಳಲ್ಲಿ ಲಘು ಭೂಕಂಪ ಆದ ಅನುಭವ ಭಾನುವಾರ ರಾತ್ರಿ 8.15ರ ವೇಳೆಯಲ್ಲಿ ಉಂಟಾಗಿದೆ.
ಮನೆಗಳಲ್ಲಿದ್ದ ಪಾತ್ರೆ ಪಡಗಗಳು ಅಲುಗಾಡಿದ ಹಾಗೂ ಕೆಳಗೆ ಬಿದ್ದ ಅನುಭವ ಕೆಲ ನಿವಾಸಿಗಳಿಗೆ ಉಂಟಾಗಿದೆ. ಯಾವುದೇ ಹಾನಿ ಸಂಭವಿಸಿಲ್ಲ.

ಮೆಹಬೂಬ್, ಫಿರೋಝ್ ಮನ್ನಾ ಆಯ್ಕೆ
ಉಡುಪಿ:
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಉಡುಪಿ ತಾಲೂಕು ಸಮಿತಿ ಅಧ್ಯಕ್ಷರಾಗಿ ಮೆಹಬೂಬ್ ಬೈಕಾಡಿ ಹಾಗೂ ಕಾರ್ಯದರ್ಶಿಯಾಗಿ ಫಿರೋಝ್ ಮನ್ನಾ ಅವರನ್ನು ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆ ಮಾಡಲಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾಧ್ಯಕ್ಷ ಅನ್ವರ್ ಅಲಿ ಕಾಪು, ಪ್ರಧಾನ ಕಾರ್ಯದರ್ಶಿ ಅಝೀಝ್ ಅಹ್ಮದ್ ಉದ್ಯಾವರ, ಕೋಶಾಧಿಕಾರಿ ರಿಝಾಝ್ ಅಹ್ಮದ್ ಕುಕ್ಕಿಕಟ್ಟೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments