ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮುಸ್ಲಿಂ ನಾಮಧಾರಿ ಅಭ್ಯರ್ಥಿಗಳನ್ನು ಬಹಿಷ್ಕರಿಸಲು ಕರೆ

Rashmi Kasaragodu
Updated On : 2 May 2013, 1:27 am

ಮಂಗಳೂರು: ಮೇ 5ರಂದು ನಡೆಯುವ ಚುನಾವಣೆಯಲ್ಲಿ ಇಸ್ಲಾಮಿನ ಗಂಧಗಾಳಿ ಇಲ್ಲದ ಮುಸ್ಲಿಂ ನಾಮಧಾರಿ ಅಭ್ಯರ್ಥಿಗಳನ್ನು ಸೋಲಿಸಬೇಕು ಎಂದು ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್‌ನ ಕೇಂದ್ರೀಯ ಮಂಡಳಿ ಕರೆ ನೀಡಿದೆ.
ದೇಶದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬ್ದುಲ್ ಕಲಾಂ ಅಜಾದ್‌ರಂಥ ಕೆಲವೇ ಮಂದಿ ಧರ್ಮನಿಷ್ಠರನ್ನು ಹೊರತುಪಡಿಸಿದರೆ ಕಾಂಗ್ರೆಸ್ ಮತ್ತಿತರರ ರಾಜಕೀಯ ಪಕ್ಷಗಳು ಮುಸ್ಲಿಂ ಪ್ರತಿನಿಧಿಗಳಾಗಿ ಆಯ್ಕೆಯಾದ ಬಹುತೇಕ ಮಂದಿ ಇಸ್ಲಾಂ ಧರ್ಮಕ್ಕೆ ಅಪಚಾರ ಎಸಗಿದ್ದಾರೆ. ಇದರಿಂದಾಗಿ ಮುಸ್ಲಿಮರು ಇಂದಿನ ಸ್ಥಿತಿಗೆ ಇಳಿದಿದ್ದು, ಹಿಂದೂ-ಕ್ರೈಸ್ತ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಮತ ಯಾಚಿಸುವ ಮುಸ್ಲಿಂ ನಾಮಧಾರಿ ಅಭ್ಯರ್ಥಿಗಳನ್ನು ಸೋಲಿಸುವಂತೆ ಮುಸ್ಲಿಂ ಮತದಾರರಲ್ಲಿ ಮಂಡಳಿ ಕಾರ್ಯದರ್ಶಿ ಇಸ್ಮಾಯಿಲ್ ಶಾಫಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement