ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಶಿರಾಡಿ ಪರಿವಾರ ದೈವಗಳ ಪ್ರತಿಷ್ಠೆ, ಕಲಶಾಭಿಷೇಕ

Lingaraj Badiger
Updated On : 2 May 2013, 12:03 pm

ಪುತ್ತೂರು: ಸವಣೂರು ಗ್ರಾಮದ ಮಾಲೆತ್ತಾರು ಗ್ರಾಮ ದೈವವಾದ ಶಿರಾಡಿ ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಕಾರ್ಯಕ್ರಮ ಬುಧವಾರ ಆರಂಭಗೊಂಡಿದ್ದು, ಶುಕ್ರವಾರದವರೆಗೆ ನಡೆಯಲಿದೆ ಎಂದು ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವ ಅಧ್ಯಕ್ಷ ಸವಣೂರು ಸೀತಾರಾಮ ರೈ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ರು. 4 ಲಕ್ಷ ವೆಚ್ಚದಲ್ಲಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಸಲಾಗಿದೆ ಎಂದರು.
ಗುರುವಾರ ವೈದಿಕ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಶುಕ್ರವಾರ ವೈದಿಕ ಕಾರ್ಯಕ್ರಮ ನಡೆಯಲಿದ್ದು, ಬಳಿಕ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ವೈದ್ಯ ಡಾ.ಎಂ.ಕೆ. ಪ್ರಸಾದ್, ಉದ್ಯಮಿ ಅಶೋಕ್ ರೈ, ಭೂ ಅಭಿವೃದ್ಧಿ ಬ್ಯಾಂಕ್‌ಅಧ್ಯಕ್ಷ ಕೆ.ಎಸ್. ರಂಗನಾಥ ರೈ ಗುತ್ತು, ಭಾರತೀಯ ರಿಸರ್ವ್ ಬ್ಯಾಂಕ್‌ನ ಉತ್ತರ ವಲಯ ನಿರ್ದೇಶಕ ನವೀನ್ ಭಂಡಾರಿ ಸಿದ್ಯಾಳ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಆರ್. ಕೋಡಿಬೈಲು, ಉಪಾಧ್ಯಕ್ಷರಾದ ರಾಘವ ಗೌಡ, ಬೆಳಿಯಪ್ಪ ಗೌಡ, ಸದಸ್ಯ ವೆಂಕಪ್ಪ ಶೆಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement