ಬೈಕ್ ಕಳವು: ಓರ್ವ ಬಂಧನ
ಮೂಲ್ಕಿ: ಮೂಲ್ಕಿ ಠಾಣಾ ವ್ಯಾಪ್ತಿಯ ಕೆಂಪುಗುಡ್ಡೆ ಎಂಬಲ್ಲಿ ಬೈಕ್ಗಳ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಕಳ್ಳತನ ಮಾಡಿದ ಬೈಕ್ ಸಮೇತ ಹಿಡಿದು ಹೆಸರು ಕೇಳಿದಾಗ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದುದನ್ನು ಕಂಡು ಹೆಚ್ಚಿನ ವಿಚಾರಣೆಗಾಗಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಮೂಲ್ಕಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
ಬೈಕ್ ಡಿಕ್ಕಿ: ಪಾದಚಾರಿಗೆ ಗಾಯ
ಮೂಲ್ಕಿ: ಇಲ್ಲಿನ ಠಾಣಾ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಪ್ರಕರಣವೊಂದರಲ್ಲಿ ಪಕ್ಷಿಕೆರೆಯ ತೋಕೂರು ಬಳಿ ರಸ್ತೆ ಬದಿ ನಡೆದುಕೊಂದು ಹೋಗುತ್ತಿದ್ದ ಸ್ಥಳೀಯ ನಿವಾಸಿ ಭಾಸ್ಕರ ದೇವಾಡಿಗ ಎಂಬವರಿಗೆ ಬೈಕೊಂದು ಡಿಕ್ಕಿಯಾಗಿ ಕಾಲಿಗೆ ಗಂಭೀರ ಗಾಯವಾಗಿದೆ. ಬೈಕ್ ಸವಾರನ ವಿರುದ್ಧ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.