ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಅನ್ಯ ರಾಜ್ಯದವರಿಗೆ ಮತದಾನ: ವಾಗ್ವಾದ

Vishwanath S
Updated On : 6 May 2013, 11:40 am

ಮಂಗಳೂರು: ಕೇರಳದ ಮತದಾರರಿಗೆ ಮತದಾನಕ್ಕೆ ಅವಕಾಶ ನೀಡುವ ವಿಚಾರದಲ್ಲಿ ನಗರದ ಸೆಬಾಸ್ಟಿಯನ್ ಮತಗಟ್ಟೆ ಹಾಗೂ ಕಪಿತಾನಿಯಾದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಅಥೆನಾ ಆಸ್ಪತ್ರೆ ದಾದಿಯೊಬ್ಬರು ತನ್ನ 25 ಮಂದಿ ಸಂಗಡಿಗರ ಜತೆ ಮತಗಟ್ಟೆಗೆ ಆಗಮಿಸಿದ್ದರು. ಇವರ ಹೆಸರು ಕೇರಳದಲ್ಲಿ ಮತದಾರರ ಪಟ್ಟಿಯಲ್ಲಿದ್ದು, ಮತದಾನಕ್ಕೆ ಅವಕಾಶ ನೀಡಬಾರದು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು. ಆದರೆ ತಾನು ಕಳೆದ ಸ್ಥಳೀಯಾಡಳಿತ ಚುನಾವಣೆಯಲ್ಲಿ ಮತ ಚಲಾಯಿಸಿದ್ದರಿಂದ ಈ ಬಾರಿ ತನಗೆ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಯುವತಿ ದಾಖಲೆ ಮುಂದಿಟ್ಟರು. ಬಳಿಕ ಮತಗಟ್ಟೆ ಅಧಿಕಾರಿಗಳು ಮತದಾನಕ್ಕೆ ಅವಕಾಶ ಮಾಡಿಕೊಟ್ಟರು. ಅಷ್ಟರಲ್ಲಿ ಜಮಾಯಿಸಿದ್ದ ಉಭಯ ಪಕ್ಷಗಳ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದರು.
ಕಪಿತಾನಿಯಾದಲ್ಲಿ ಕಂಕನಾಡಿ ಹಾಸ್ಟೆಲ್‌ನ ಕೇರಳದ ವಿದ್ಯಾರ್ಥಿಗಳು ಮತ ಚಲಾಯಿಸಲು ಬಂದಾಗ ಬಿಜೆಪಿ ಕಾರ್ಯಕರ್ತರು ಆಕ್ಷೇಪಿಸಿದ ವಿದ್ಯಮಾನ ನಡೆಯಿತು. ಈ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಾಗ್ವಾದಕ್ಕೆ ತೊಡಗಿದ್ದು, ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಲಾಠಿ ಬೀಸಿ ಕಾರ್ಯಕರ್ತರನ್ನು ಚದುರಿಸಿದರು. ಅಷ್ಟರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಸ್ಥಳಕ್ಕೆ ಆಗಮಿಸಿದರು. ಅರೆಸೇನಾ ಪಡೆ ಯೋಧರು ಆಗಮಿಸಿ ಎಲ್ಲರನ್ನು ಸ್ಥಳ ಬಿಟ್ಟು ತೆರಳುವಂತೆ ಸೂಚಿಸಿದರು.   

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement