ಮತದಾನ ವಿವಾದ
ಮಂಗಳೂರು: ಕೇರಳದ ಯುವತಿಗೆ ಮತದಾನಕ್ಕೆ ಅವಕಾಶ ನೀಡುವ ವಿಚಾರದಲ್ಲಿ ನಗರದ ಸೆಬಾಸ್ಟಿಯನ್ ಮತಗಟ್ಟೆಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಅಥೆನಾ ಆಸ್ಪತ್ರೆ ದಾದಿ ತನ್ನ 25 ಮಂದಿ ಸಂಗಡಿಗರ ಜತೆ ಮತಗಟ್ಟೆಗೆ ಆಗಮಿಸಿದ್ದರು. ಇವರ ಹೆಸರು ಕೇರಳದಲ್ಲಿ ಮತದಾರರ ಪಟ್ಟಿಯಲ್ಲಿದ್ದು, ಮತದಾನಕ್ಕೆ ಅವಕಾಶ ನೀಡಬಾರದು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು. ಆದರೆ ತಾನು ಕಳೆದ ಸ್ಥಳೀಯಾಡಳಿತ ಚುನಾವಣೆಯಲ್ಲಿ ಮತ ಚಲಾಯಿಸಿದ್ದರಿಂದ ಈ ಬಾರಿ ತನಗೆ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಯುವತಿ ದಾಖಲೆ ಮುಂದಿಟ್ಟರು. ಬಳಿಕ ಮತಗಟ್ಟೆ ಅಧಿಕಾರಿಗಳು ಮತದಾನಕ್ಕೆ ಅವಕಾಶ ಮಾಡಿಕೊಟ್ಟರು. ಅಷ್ಟರಲ್ಲಿ ಜಮಾಯಿಸಿದ್ದ ಉಭಯ ಪಕ್ಷಗಳ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದರು.