ಪಿಯುಸಿಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ
ಕುಂದಾಪುರ: ತಲ್ಲೂರು ಗ್ರಾಮದ ಚಿಕ್ಕುಮನೆ ಎಂಬಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರು ವೀಣಾ, ಈಕೆ ಶೇಖರ ಪೂಜಾರಿ (46) ಎಂಬವರ ಅಣ್ಣನ ಮಗಳು. ಈಕೆ ಸೋಮವಾರ ಇಂಟರ್ನೆಟ್ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ನೋಡಿ, ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದರಿಂದ ಮನನೊಂದು, ರಾತ್ರಿ ಮನೆ ಸಮೀಪದ ಬಾಬು ನಾಯ್ಕ ಎಂಬವರ ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಶೇಖರ ಪೂಜಾರಿ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.