ಸಿದ್ದು ಸಿಎಂ: ಸುಳ್ಯದಲ್ಲಿ ಸಂಭ್ರಮಾಚರಣೆ
ಸುಳ್ಯ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಸಿದ್ದರಾಮಯ್ಯ ಅವರ ಆಯ್ಕೆ ಖಚಿತವಾಗುತ್ತಿದ್ದಂತಯೇ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಸೇರಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.