ವೈದ್ಯಾಧಿಕಾರಿ ನೇಮಕಕ್ಕೆ ಮನವಿ
ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರಿಗೆ ಭಡ್ತಿ ನೀಡಿರುವುದರಿಂದ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ಜನತೆ ಸಂಕಷ್ಟ ಎದುರಿಸುವಂತಾಗಿದೆ ಎಂದು ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಸಂಚಾಲಕ ಎಸ್. ಅಬೂಬ್ಬಕ್ಕರ್ ಆರ್ಲಪದವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ಯು.ಟಿ. ಖಾದರ್ ಮತ್ತು ಶಾಸಕಿ ಶಕುಂತಳಾ ಶೆಟ್ಟಿ ಮನವಿ ನೀಡಿದ್ದಾರೆ. ಆರೋಗ್ಯ ಕೇಂದ್ರದಲ್ಲಿ ಇಬ್ಬರು ವೈದ್ಯರ ಹುದ್ದೆ ಇದ್ದು ಒಬ್ಬರು ಮಹಿಳಾ ವೈದ್ಯೆಯ ಅವಶ್ಯಕತೆ ಇದೆ. ಇಲ್ಲಿ ಕನಿಷ್ಠ ಮೂಲ ಸೌಲಭ್ಯಗಳು ಇದ್ದು, ವೈದ್ಯಾಧಿಕಾರಿಯನ್ನು ನೇಮಕ ಮಾಡಿ ಬಡವರ ಬವಣೆಯನ್ನು ನಿವಾರಿಸಲು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಅವರು ಲಿಖಿತ ಮನವಿಯಲ್ಲಿ ಕೋರಿದ್ದಾರೆ.