ಗ್ರಾಮೀಣ ಸೇವೆ ಮಾಡದ ವೈದ್ಯರಿಗೆ ದಂಡ: ಸಚಿವ
ಮಂಗಳೂರು: ವೈದ್ಯರು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯವಾಗಿದ್ದು, ತಪ್ಪಿದರೆ 15ರಿಂದ 20 ಲಕ್ಷ ವರೆಗೆ ದಂಡ ವಿಧಿಸುವ ಕಾಯ್ದೆ ಶೀಘ್ರ ಜಾರಿ ಬರಲಿದ್ದು, ಇದು ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಲಾಗಿದೆ. ಆಯುಷ್ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಮುಂದೆಯೂ ಪ್ರೋತ್ಸಾಹ ನೀಡುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯವರು ಇತರ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ತಕ್ಷಣ ಮಾತೃ ಇಲಾಖೆಗೆ ಮರಳಬೇಕು ಎಂದು ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.