ಟ್ರೈಲರ್-ಬಸ್ ಡಿಕ್ಕಿ: ಸಂಚಾರ ಅಸ್ತವ್ಯಸ್ತ
ಮೂಲ್ಕಿ: ಟ್ರೈಲರ್ ಹಾಗೂ ಸರ್ಕಾರಿ ಬಸ್ ಡಿಕ್ಕಿಯಾಗಿ ಕೆಲ ಸಮಯ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಪಡುಪಣಂಬೂರು ಕಿರು ಸೇತುವೆ ಬಳಿ ಸೋಮವಾರ ಬೆಳಗ್ಗೆ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸರ್ಕಾರಿ ಬಸ್ಸಿನ ಮುಂಭಾಗದ ಟಯರ್ ಸ್ಫೋಟಗೊಂಡ ಪರಿಣಾಮ ಆಯತಪ್ಪಿದ ಬಸ್, ಟ್ರೈಲರ್ಗೆ ಡಿಕ್ಕಿ ಹೊಡೆಯಿತು. ಪರಿಣಾಮ ರಸ್ತೆ ಸಂಚಾರ ಸ್ವಲ್ಪ ಸಮಯ ಅಸ್ತವ್ಯಸ್ತಗೊಂಡಿತು. ಬಸ್ಸಿನ ಮುಂಭಾಗ ಹಾಗೂ ಟ್ರೈಲರ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.