ಸಾಂಕ್ರಾಮಿಕ ರೋಗ ಮಾಹಿತಿ ನೀಡಿ
ಮಂಗಳೂರು: ಡೆಂಗ್ಯೂ ಮತ್ತು ಮಲೇರಿಯಾ ಸಾಂಕ್ರಾಮಿಕ ರೋಗಗಳ ಕುರಿತು ಖಾಸಗಿ ವೈದ್ಯಕೀಯ ಸಂಸ್ಥೆಗಳು ಮಾಹಿತಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ಪ್ರಕರಣ ಕಂಡುಬರುತ್ತಿದ್ದು, ಖಾಸಗಿ ವೈದ್ಯಕೀಯ ಸಂಸ್ಥೆಗಳು ಇನ್ನೂ ಪ್ರಕರಣದ ಕುರಿತು ಮಾಹಿತಿ ನೀಡದೇ ಇರುವುದರಿಂದ ಮುಂಜಾಗ್ರತ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ವೈದ್ಯಕೀಯ ಸಂಸ್ಥೆಗಳ ಪ್ರಾಧಿಕಾರದ ಗಮನಕ್ಕೆ ಬಂದಿದೆ. ಆದ್ದರಿಂದ ಎಲ್ಲ ಖಾಸಗಿ ಸಂಸ್ಥೆಗಳು ಸಾಂಕ್ರಾಮಿಕ ರೋಗಗಳು ಪತ್ತೆಯಾದಲ್ಲಿ ಕೂಡಲೇ ಜಿಲ್ಲಾ ಸರ್ವೇಕ್ಷಣಾ ಘಟಕ 0824-2427316 ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಕಾರು ಡಿಕ್ಕಿ: ರಿಕ್ಷಾ ಚಾಲಕಗೆ ಗಾಯ
ಮೂಲ್ಕಿ: ಕಾರು- ರಿಕ್ಷಾ ಡಿಕ್ಕಿಯಾಗಿ ರಿಕ್ಷಾ ಚಾಲಕ ತೀವ್ರ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಕಿನ್ನಿಗೋಳಿ ಸಮೀಪದ ಬಲವಿನಗುಡ್ಡೆಯ ನಡುಗೋಡು ಶಾಲೆ ಬಳಿ ನಡೆದಿದೆ. ಬಲವಿನಗುಡ್ಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.