ಪಗೋ ಪ್ರಶಸ್ತಿಗೆ ಆಯ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2012ನೇ ಸಾಲಿನ ಪ.ಗೋ. ಗ್ರಾಮೀಣ ವರದಿಕಾರಿಕೆ ಪ್ರಶಸ್ತಿಗೆ ಪತ್ರಕರ್ತ ಮಹಮ್ಮದ್ ಆರಿಫ್ ಪಡುಬಿದ್ರಿ ಆಯ್ಕೆಯಾಗಿದ್ದಾರೆ. 2012ರ ಜೂ.12ರಂದು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ನ್ಯಾಪ್ಕಿನ್ ಘಟಕದ ಯಶೋದಾಗಾಥೆ' ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭದ ಜೂ.1ರಂದು ಬೆಳಗ್ಗೆ 10.45ಕ್ಕೆ ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ 5001 ಮತ್ತು ಸ್ಮರಣಿಕೆ ಒಳಗೊಂಡಿದೆ. ಪ್ರಶಸ್ತಿ ಮೊತ್ತವನ್ನು ಶ್ರೀಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರಾಯೋಜಿಸುತ್ತಿದ್ದಾರೆ ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.