ಪ್ರಾಮಾಣಿಕವಾಗಿ ಹುದ್ದೆ ನಿರ್ವಹಿಸುತ್ತೇನೆ: ಜೈನ್
ಮೂಲ್ಕಿ: ತಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು ಪಕ್ಷ ನೀಡಿರುವ ಸಚಿವ ಹುದ್ದೆಯನ್ನು ಪ್ರಾಮಾಣಿಕವಾಗಿ ನಿವರ್ಹಿಸುವುದಾಗಿ ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನಾರ್ದನ ಪೂಜಾರಿಯವರ ಗೆಲವಿಗಾಗಿ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕೆಂದು ರಾಜ್ಯ ಯುವಜನ, ಕ್ರೀಡೆ ಮತ್ತು ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು.
ಮೂಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೂಲ್ಕಿ ಹೋಬಳಿಯಲ್ಲಿ ಸಚಿವರ ವಿಜಯೋತ್ಸವದ ಬಳಿಕ ಮೂಲ್ಕಿಯ ಲಲಿತ್ ಮಹಲ್ ಮುಂಭಾಗದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ನಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ ಸಚಿವರನ್ನು ಸನ್ಮಾನಿಸಿದರು. ಡಾ. ಗಣೇಶ್ ಅಮೀನ್ ಸಂಕಮಾರ್ ಅಭಿನಂದನಾ ಭಾಷಣಗೈದರು. ಮೂಲ್ಕಿ ನಗರ ಪಂಚಾಯತ್ ವತಿಯಿಂದ ಮೀನುಗಾರ ಮಹಿಳೆಯರಿಗೆ ಶೀತಲೀಕರಣ ಪೆಟ್ಟಿಗೆಯನ್ನು ಸಚಿವರು ನೀಡಿದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಸಾಲ್ಯಾನ್ ಪೈಯೊಟ್ಟು, ಕಾರ್ಯದರ್ಶಿ ವಸಂತ ಬೆರ್ನಾಡ್, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಶಶಿಕಾಂತ್ ಶೆಟ್ಟಿ, ಉಪಾಧ್ಯಕ್ಷ ಯೋಗೀಶ್ ಕೋಟ್ಯಾನ್, ಮಾಜಿ ಅಧ್ಯಕ್ಷ ಬಿ.ಎಂ. ಆಸೀಫ್ ಉಪಸ್ಥಿತರಿದ್ದರು.
--