ಅಪಘಾತ: ಬೈಕ್ ಸವಾರನಿಗೆ ಗಾಯ
ವಿಟ್ಲ: ಕಾರು ಹಾಗೂ ಬೈಕ್ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಕಾಶಿಮಠ ಸಮೀಪ ಶುಕ್ರವಾರ ಮಧ್ಯಾಹ್ನ ನಡೆದಿದೆ. ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ನಿವಾಸಿ ಇಬ್ರಾಹಿಂ ಅವರ ಪುತ್ರ ಶರೀಫ್(37) ಎಂಬಾತನೇ ಗಾಯಗೊಂಡ ಬೈಕ್ ಸವಾರ. ಈತ ಶುಕ್ರವಾರ ಮಧ್ಯಾಹ್ನ ವಿಟ್ಲ ಕಡೆಯಿಂದ ಉಕ್ಕುಡ ಕಡೆ ತೆರಳುತ್ತಿದ್ದ ವೇಳೆ ಎದುರಿನಿಂದ ತೆರಳುತ್ತಿದ್ದ ಖಾಸಗಿ ಬಸ್ಸನ್ನು ಹಿಂದಕ್ಕೆ ಹಾಕಿ ಮುಂದೆ ಹೋಗುವ ಭರದಲ್ಲಿ ಬಾಯಾರು ಮೂಲದ ಆಲಿಕುಂಞ ಅವರ ರಿಟ್ಝ್ ಕಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಹಾಗೂ ತಲೆಗೆ ಗಾಯಗಳಾಗಿದ್ದು, ವಿಟ್ಲ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.