ಇಂದು ಪ್ರತಿಭಟನೆ
ಉಪ್ಪಿನಂಗಡಿ: ಸೌಜನ್ಯಾ ಹತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಿ, ತಪ್ಪಿತಸ್ಥರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕೆಂದು ಅಗ್ರಹಿಸಿ 6ರಂದು ಉಪ್ಪಿನಂಗಡಿಯಲ್ಲಿ ಭಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಮೆರವಣಿಗೆಯು ಉಪ್ಪಿನಂಗಡಿಯ ಆದಿತ್ಯ ಹೊಟೇಲ್ ವಠಾರದಿಂದ ದೇವಾಲಯದ ಮಾರ್ಗವಾಗಿ ನಾಡಕಚೇರಿ ಬಳಿ ಸಂಪನ್ನಗೊಳ್ಳಲಿದೆ ಎಂದು ಸಂಘಟನೆಯ ಮುಂದಾಳು ಕೆ. ಜಗದೀಶ್ ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಂದು, ನಾಳೆ ಕ್ರೀಡಾಕೂಟ
ಬೆಳ್ತಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳ ಕ್ರೀಡಾಕೂಟ ನ.6, 7ರಂದು ಇಲ್ಲಿನ ಸರ್ಕಾರಿ ಪಪೂ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ಶಾಸಕ ಕೆ. ವಸಂತ ಬಂಗೇರ ಉದ್ಘಾಟಿಸಲಿದ್ದಾರೆ. ನ.7 ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮೂಲ್ಕಿ ಲಯನ್ಸ್ ಕ್ಲಬ್‌ಗೆ ಇಂದು ಕೆ.ಸಿ. ಪ್ರಭು ಭೇಟಿ
ಮೂಲ್ಕಿ: ಲಯನ್ಸ್ ಜಿಲ್ಲಾ ಗವರ್ನರ್ ಕೆ.ಸಿ. ಪ್ರಭು 6ರಂದು ಮೂಲ್ಕಿ ಲಯನ್ಸ್ ಕ್ಲಬ್‌ಗೆ ಅಧೀಕೃತ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್‌ನಲ್ಲಿ ಪತ್ರಿಕಾಗೋಷ್ಠಿ, ಮಧ್ಯಾಹ್ನ ವಿವಿಧ ಕಾರ್ಯಕ್ರಮಗಳು ಹಾಗೂ ಸಂಜೆ ಮೂಲ್ಕಿಯ ಲಯನ್ಸ್ ಸೌಧದಲ್ಲಿ ಸಭಾ ಕಾರ್ಯಕ್ರಮ ಮತ್ತು ಚಾರ್ಟರ್ ಡೇ ಕಾರ್ಯಕ್ರಮವು ಜರಗಲಿದೆ ಎಂದು ಮೂಲ್ಕಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಧನಂಜಯ ಕೋಟ್ಯಾನ್ ಮಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.