ಎಪಿಎಲ್ಗೆ 3ಕ್ಕೆ 10 ಕೆ.ಜಿ. ಅಕ್ಕಿ: ಸೊರಕೆ
ಕುಂದಾಪುರ: ಎಪಿಎಲ್ ಕಾರ್ಡ್ದಾರರಿಗೂ 3ಕ್ಕೆ 10 ಕೆ.ಜಿ. ಅಕ್ಕಿ ನೀಡಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಪ್ರಕಟಿಸಿದರು. ಶುಕ್ರವಾರ ಇಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸವಲತ್ತುಗಳನ್ನು ವಿತರಿಸಿ ಮಾತನಾಡಿ, ಅನ್ನಭಾಗ್ಯ ಯೋಜನೆಯ ನಂತರ ಎಪಿಎಲ್ ಪಡಿತರ ಕಾರ್ಡುದಾರರಿಗೆ ಈ ಹಿಂದೆ ಸಿಗುತ್ತಿದ್ದ ಅಕ್ಕಿ ಹಾಗೂ ಸೀಮೆಎಣ್ಣೆ ಇತ್ತೀಚಿಗೆ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಇನ್ನು ಮುಂದೆ ಎಲ್ಲರಿಗೂ ಪಡಿತರ ಸೌಲಭ್ಯ ವಿಸ್ತರಿಸಲಾಗುವುದು ಎಂದರು.