ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಫಾತಿಮಾಗೆ ಏಕಲವ್ಯ ಪ್ರಶಸ್ತಿ ಪ್ರದಾನ

Rashmi Kasaragodu
Updated On : 12 Nov 2013, 12:04 pm

ಮಂಗಳೂರು: ಕ್ಯಾಂಪಸ್ ಫ್ರಂಟ್ ವತಿಯಿಂದ ಎನ್ಜಿಒ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಏಕಲವ್ಯ ಪ್ರಶಸ್ತಿಯನ್ನು ಕಸಬಾ ಬೆಂಗ್ರೆಯ ಫಾತಿಮಾ ಜುಬೀನಾಗೆ ಅಕ್ಷರ ಸಂತ ಹರೇಕಳ ಹಾಜಬ್ಬ ಪ್ರದಾನ ಮಾಡಿದರು. ಹೀರಾ ಮಹಿಳಾ ಕಾಲೇಜ್ನ ವಿದ್ಯಾರ್ಥಿನಿ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದರು. ಪ್ರಶಸ್ತಿ ಸ್ವೀಕರಿಸಿ ಫಾತಿಮಾ ಮಾತನಾಡಿ, ಸಾಕ್ಷರತೆ, ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದರು. ಅಹಿಂದ ಮುಖಂಡ ವಾಸುದೇವ ಬೋಳೂರು ಮಾತನಾಡಿ ರಾಜಕೀಯ ಪಕ್ಷ ಮತ್ತು ಸರ್ಕಾರದ ಹೆಚ್ಚಿನ ಆಡಳಿತಾತ್ಮಕ ಉದ್ಯೋಗ ಮತ್ತು ಅಧಿಕಾರ ಬ್ರಾಹ್ಮಣರಿಗೆ ಸಿಗುತ್ತಿದೆ. ಕಮ್ಯೂನಿಷ್ಟ್ ಪಕ್ಷಗಳಲ್ಲಿಯೂ ಇದೇ ಪರಿಸ್ಥಿತಿ ಎಂದರು. ಅಹಿಂದದಿಂದ ಅಲ್ಪಸಂಖ್ಯಾತರು ಮತ್ತು ದಲಿತರನ್ನು ಪ್ರತ್ಯೇಕಿಸುವ ಕೆಲಸ ನಡೆಯುತ್ತಿದೆ ಎಂದರು. ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಮಹಮ್ಮದ್ ಇಕ್ಬಾಲ್ ಅಧ್ಯಕ್ಷತೆ ವಹಿಸಿದ್ದರು. ಸಲೀಂ ಮಲಾರ್, ಮೊಹಮ್ಮದ್ ತಫ್ಸೀರ್, ಸನಾವುಲ್ಲ ಇದ್ದರು.



ಗ್ರಾಪಂ ಅಭಿನಂದನೆ
ಬೆಳ್ತಂಗಡಿ: ಸೌಜನ್ಯಾ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಒತ್ತಾಯಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಶಾಸಕ ಕೆ. ವಸಂತ ಬಂಗೇರ ಅವರಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಭಿನಂದನೆ ಸಲ್ಲಿಸಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement