ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಇಂದು ಧರಣಿ ಸತ್ಯಾಗ್ರಹ

Rashmi Kasaragodu
Updated On : 13 Nov 2013, 12:13 pm

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಬ್ರಹ್ಮರಕೂಟ್ಲು ಪರಿಸರದಲ್ಲಿ ವಿವಿಧ ಮೂಲ ಸೌಕರ್ಯಗಳ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಬ್ರಹ್ಮರಕೂಟ್ಲು ಕಳ್ಳಿಗೆ ಜನಪರ ಹೋರಾಟ ಸಮಿತಿ ಆಶ್ರಯದಲ್ಲಿ ನ.13ರಂದು ಬ್ರಹ್ಮರಕೂಟ್ಲುನಲ್ಲಿ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಯಲಿದೆ. ಬ್ರಹ್ಮರಕೂಟ್ಲು ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಅಭಿವೃದ್ಧಿ ಕಾಮಗಾರಿ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ಮೂಲ ಸೌಕರ್ಯಗಳ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ. ಆದರೂ ಇಲಾಖೆ ಟೋಲ್ ಸಂಗ್ರಹದ ಸಿದ್ಧತೆಯಲ್ಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ, ಹೆದ್ದಾರಿ ಇಲಾಖಾಧಿಕಾರಿಗಳ ಸಹಿತ ಜನಪ್ರತಿನಿಧಿಗಳಿಗೆ ಈಗಾಗಲೇ ಮನವಿ ನೀಡಲಾಗಿದ್ದು ಮೂಲ ಸೌಲಭ್ಯ ಕಲ್ಪಿಸುವವರೆಗೆ ಟೋಲ್ ಸಂಗ್ರಹಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಲಿಖಿತ ಭರವಸೆ ನೀಡುವಂತೆ ಒತ್ತಾಯಿಸಿದ್ದರೂ ಇದುವರೆಗೂ ಇಲಾಖೆ ನಮ್ಮ ಮನವಿಗೆ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹ ಆಯೋಜಿಸಲಾಗಿದೆ ಎಂದು ಹೋರಾಟ ಸಮಿತಿಯ ಪ್ರಮುಖರು ತಿಳಿಸಿದ್ದಾರೆ. ಧರಣಿ ದಿನಂದಂದು ಅಧಿಕಾರಿಗಳು ಸ್ಥಳಕ್ಕೆ ಬಂದು ಈ ಬಗ್ಗೆ ಲಿಖಿತ ಭರವಸೆ ನಿಡದಿದ್ದಲ್ಲಿ ಅಂದು ಸಂಜೆ 5 ಗಂಟೆಗೆ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಲಾಗುವುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement