ಯಕ್ಷಗಾನ ಕಲಿಕಾ ಕಮ್ಮಟ
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ, ತಂಜಾವೂರಿನ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಸಹಯೋಗದೊಂದಿಗೆ ಯಕ್ಷಗಾನ ಕಲಿಕಾ ಕಮ್ಮಟ ತರಬೇತಿಯನ್ನು ಆಯೋಜಿಸಿದೆ. ತರಬೇತಿಗೆ 15 ರಿಂದ 30 ವರ್ಷ ವಯೋವಾನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 15 ಮಂದಿ ಶಿಬಿರಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ನ. 15 ಕೊನೆ ದಿನ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ 080-2113146 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.