ಯುವತಿ ಮೇಲೆ ಅತ್ಯಾಚಾರ: ದೂರು
ಬೆಳ್ತಂಗಡಿ: ಯುವತಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ನಡೆಸಿರುವುದಾಗಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳಾದ ಸಂತೋಷ್ ಮತ್ತು ಜಗದೀಶ್ ಎಂಬವರಿಗೆ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಕಾಜೂರಿನ ಯುವತಿಯನ್ನು ಆರೋಪಿಗಳಿಬ್ಬರು ಕಾರಿನಲ್ಲಿ ಕರೆದೊಯ್ಯುತ್ತಿದ್ದಾಗ ಅಲ್ಲಿನ ನಾಗರಿಕರು ಕಾರು ತಡೆದು ಆರೋಪಿಗಳಿಗೆ ಧರ್ಮದೇಟು ನೀಡಿದ್ದಾರೆ ಎಂದು ಹೇಳಲಾಗಿದೆ.
ಆರೋಪಿಗಳಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಯುವತಿಯೊಂದಿಗೆ ಯುವಕರಿಗೆ ಮೊದಲೇ ಸ್ನೇಹವಿತ್ತು ಎಂದೂ ಹೇಳಲಾಗುತ್ತಿದೆ. ಘಟನೆ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಲಾಗಿದ್ದು, ಪ್ರಕರಣದ ತನಿಖೆಗೆ ಸಮಿತಿ ಅಧ್ಯಕ್ಷೆ ಆಶಾ ನಾಯಕ್ ಸ್ಥಳಕ್ಕೆ ಧಾವಿಸಿ ಮಾತುಕತೆ ನಡೆಸಿದ್ದಾರೆ.