ವಿರಾಸತ್ ನುಡಿಸಿರಿಗೆ ಹೊರೆಕಾಣಿಕೆ- ನಿರ್ಧಾರ
ಮೂಲ್ಕಿ: ಡಿಸೆಂಬರ್ನಲ್ಲಿ ಮೂಡುಬಿದಿರೆಯಲ್ಲಿ ಜರುಗಲಿರುವ ಆಳ್ವಾಸ್ ವಿರಾಸತ್ ನುಡಿಸಿರಿಯನ್ನು ಯಶಸ್ವಿಗೊಳಿಸುವ ಬಗ್ಗೆ ಕಿನ್ನಿಗೋಳಿಯ ಯುಗಪುರುಷದ ಸಭಾಭವನದಲ್ಲಿ ಜರುಗಿದ ಕಿನ್ನಿಗೋಳಿ ಪರಿಸರದ ಪೂರ್ವಭಾವಿ ಸಭೆಯಲ್ಲಿ ಹೊರೆಕಾಣಿಕೆ ಕಳುಹಿಸಲು ನಿರ್ಧರಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಯುಗಪುರುಷದ ಕೆ. ಭುವನಾಭಿರಾಮ ಉಡುಪ ವಹಿಸಿದ್ದರು. ಶ್ರೀ ಕ್ಷೇತ್ರ ಕಟೀಲಿನ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ, ಕಟೀಲು ದೇವಳ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯರಾಮ ಪೂಂಜ, ಕಿನ್ನಿಗೋಳಿ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸಿಂತಿಯಾ ಕುಟಿನ್ಹೊ, ಲಯನ್ಸ್ ಕ್ಲಬ್ ಅಧ್ಯಕ್ಷ ವೈ.ಕೆ. ಸಾಲ್ಯಾನ್ ಇದ್ದರು.