ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಆಳ್ವಾಸ್ ವಿಶ್ವ ನುಡಿಸಿರಿ: ಪುಸ್ತಕ ಮಳಿಗೆ, ಪ್ರತಿನಿಧಿ ಆಹ್ವಾನ

Mainashree
Updated On : 20 Nov 2013, 12:21 pm

ಮೂಡುಬಿದಿರೆ: ಮೂಡುಬಿದಿರೆ ವಿದ್ಯಾಗಿರಿಯಲ್ಲಿ ಡಿ.19ರಿಂದ 22ರವರೆಗೆ ನಡೆಯಲಿರುವ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ಕಾರ್ಯಕ್ರಮದಲ್ಲಿ ಬೃಹತ್ ಪುಸ್ತಕ ಮೇಳ ನಡೆಯಲಿದೆ. ಇದರಲ್ಲಿ ಭಾಗವಹಿಸಲು ಬಯಸುವ ಪುಸ್ತಕ ಮಾರಾಟಗಾರರು, ಪ್ರಕಾಶಕರು ಮತ್ತು ಇತರೆ ವಸ್ತು ಮಾರಾಟಗಾರರು ನ.26ರೊಳಗೆ ಮಳಿಗೆಗಳನ್ನು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಡಾ.ಎಂ. ಮೋಹನ ಆಳ್ವ ಹೇಳಿದ್ದಾರೆ.
 ನಾಲ್ಕು ದಿನ ನಡೆಯಲಿರುವ ಈ ಸಮ್ಮೇಳನದಲ್ಲಿ ಪ್ರತಿದಿನ 2 ಲಕ್ಷಕ್ಕೂ ಅಧಿಕ ಸಾಹಿತ್ಯಾಸಕ್ತರು ಭಾಗವಹಿಸಲಿದ್ದು, ವಿಶೇಷವಾಗಿ ಶಾಲೆ, ಕಾಲೇಜು ವಿದ್ಯಾರ್ಥಿಗಳು ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಓದುಗರಿಗೆ ಕನ್ನಡ ಮತ್ತು ಇತರೆ ಭಾಷೆಗಳ ಪುಸ್ತಕಗಳು ಒಂದೆಡೆ ಲಭ್ಯವಾಗಬೇಕೆಂಬ ಹಂಬಲದಿಂದ ಈ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ. ಆಸಕ್ತರು ದೂ. 9448625877 ಅಥವಾ 08258-261229 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಆಳ್ವ ತಿಳಿಸಿದ್ದಾರೆ..
ವಿದ್ಯಾರ್ಥಿ ಪ್ರತಿನಿಧಿಗಳಿಗೆ ಆಹ್ವಾನ: ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್‌ನಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ವಿದ್ಯಾರ್ಥಿಗಳು ಪ್ರತಿನಿಧಿಗಳಾಗಿ ಹೆಸರನ್ನು ನೋಂದಾಯಿಸಲು ಅವಕಾಶವಿದೆ. ತಮ್ಮ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಪ್ರಮಾಣ ಪತ್ರದೊಂದಿಗೆ ತಮ್ಮ ವಿವರಗಳನ್ನು ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ- 574227 ಇಲ್ಲಿಗೆ ಕಳುಹಿಸಿಕೊಡಬಹುದು. ತಂಡವಾಗಿ ಬರುವ ವಿದ್ಯಾರ್ಥಿಗಳ ಜತೆಗೆ ಶಿಕ್ಷಕರು ಕಡ್ಡಾಯವಾಗಿ ಇರಬೇಕು. ವಿವರಗಳಿಗೆ ದೂ. 08258-261229 ಅಥವಾ 261111 ಸಂಪರ್ಕಿಸಬಹುದು.
ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ, ಈ ಬಗ್ಗೆ ಸಮನ್ವಯ ಸಮಿತಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಹಾಗೂ ಮುಂಬರುವ ಲೋಕಸಭೆ ಚುನಾವಣೆ ತಯಾರಿ ಕುರಿತಂತೆ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಯಾಗಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಸ್ತಾಪವೇ ಆಗಿಲ್ಲ ಎಂದು ಸಿದ್ದರಾಮಯ್ಯ ಅವರು ಎಲ್ಲ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಈ ಸಂಬಂಧ ಶೀಘ್ರದಲ್ಲಿಯೇ ಪ್ರಕ್ರಿಯೆ ಆರಂಭಿಸಲಾಗುವುದು. ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಅಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದು ಅವರು ವಿಧಾನಸೌಧದ ಮುಂಭಾಗ ಮಂಗಳವಾರ ನಡೆದ ರಾಷ್ಟ್ರೀಯ ಭಾವೈಕ್ಯತಾ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಪ್ರತಿ 3 ತಿಂಗಳಿಗೊಮ್ಮೆ ಸರ್ಕಾರ ಮತ್ತು ಸಚಿವರ ಕಾರ್ಯವೈಖರಿ ಕುರಿತಂತೆ ಸಮನ್ವಯ ಸಮಿತಿಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸಭೆ ನಡೆಸಲಾಗುವುದು. ಇದಕ್ಕೂ ಮುಂಚೆ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿ ಅನುಮತಿ ಪಡೆದು ನೇಮಕ ಮಾಡುತ್ತೇವೆ ಎಂದರು.
ಡಿ.2ರವರೆಗೆ ಸೈಲ್‌ಗೆ ನ್ಯಾಯಾಂಗ ಬಂಧನ
ಬೆಂಗಳೂರು:  ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಸತೀಶ್ ಸೈಲ್ ನ್ಯಾಯಾಂಗ ಬಂಧನ ಅವಧಿಯನ್ನು ಡಿ.2ರ ವರೆಗೆ ವಿಸ್ತರಿಸಲಾಗಿದೆ. ಜಾಮೀನು ಕೋರಿ ಸತೀಶ್ ಸೈಲ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ನ್ಯಾಯಾಲಯ ನ.23ಕ್ಕೆ ಕಾಯ್ದಿರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement