ಸೌಜನ್ಯಾ ಹತ್ಯಾಚಾರ: ಸಿಪಿಎಂ ಕಾಲ್ನಡಿಗೆ ಜಾಥಾ
ಸುಳ್ಯ: ಧರ್ಮಸ್ಥಳದ ಸೌಜನ್ಯಾ ಹತ್ಯಾಚಾರ ಪ್ರಕರಣದ ಸಿಬಿಐ ತನಿಖೆಯ ಜೊತೆಗೆ ಆ ಪರಿಸರದಲ್ಲಿ ನಡೆದಿರುವ ಅಸಹಜ ಸಾವುಗಳ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಲು ಆಗ್ರಹಿಸಿ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸುಳ್ಯದಿಂದ ಮಂಗಳೂರಿಗೆ ಹಮ್ಮಿಕೊಂಡ ಕಾಲ್ನಡಿಗೆ ಜಾಥಾಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಗುಲ್ಬರ್ಗ ಸಿಂಗಾರಹಳ್ಳಿ ಮರುಳಶಂಕರ ದೇವರ ಗುರುಪೀಠದ ಶ್ರೀ ಸಿದ್ದಬಸವ ಕಬೀರಾನಂದ ಮಹಾಸ್ವಾಮಿ ಜಾಥಾ ಉದ್ಘಾಟಿಸಿ ಮಾತನಾಡಿ, ಅಮಾಯಕ ಹುಡುಗಿ ಅತ್ಯಾಚಾರ ಮತ್ತು ಕೊಲೆ ನಡೆದಾಗ ನ್ಯಾಯ ದೊರಕಿಸಿಕೊಡಿ ಎಂದು ಪ್ರತಿಭಟನೆ ನಡೆಸುವ ಸ್ಥಿತಿ ಉದ್ಭವವಾಗಿರುವುದೇ ದುರ್ದೈವದ ಸಂಗತಿ ಎಂದರು.