ಮಹಿಳಾ ಜಾಗೃತಿ ಅಭಿಯಾನ
ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(ಸಿಎಫ್ಐ) ವತಿಯಿಂದ ಡಿ. 10ರವರೆಗೆ 'ನಿರ್ಭಯಾ' ಎಂಬ ಮಹಿಳಾ ಜಾಗೃತಿ ಅಭಿಯಾನ ರಾಜ್ಯಾದ್ಯಂತ ನಡೆಯಲಿದೆ. ನ್ಯಾಶನಲ್ ಕ್ರೈಂ ರೆಕಾರ್ಡ್ ಬ್ಯೂರೊ ಪ್ರಕಾರ ಭಾರತದಲ್ಲಿ ಗಂಟೆಗೆ ಒಬ್ಬ ಮಹಿಳೆ ವರದಕ್ಷಿಣೆ ಕಿರುಕುಳಕ್ಕೆ ಪ್ರಾಣ ಬಿಡುತ್ತಿದ್ದಾರೆ. ಈ ಪ್ರಯುಕ್ತ ಮಹಿಳಾ ಜಾಗೃತಿ ಮೂಡಿಸುವ ಸಲುವಾಗಿ ಸಾಕು ಕ್ರೌರ್ಯ, ಬೇಕು ಸ್ತ್ರೀ ಸ್ವಾತಂತ್ರ್ಯ ಎಂಬ ಘೋಷಣೆಯೊಂದಿಗೆ ಎಲ್ಲಾ ಕ್ಯಾಂಪಸ್ನಲ್ಲಿ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಸಿಎಫ್ಐ ರಾಜ್ಯಾಧ್ಯಕ್ಷ ಮಹಮ್ಮದ್ ಇಕ್ಬಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.