ಭಜನಾ ಮಂಡಳಿ ಸುವರ್ಣ ಮಹೋತ್ಸವ: ಇಂದು ವಿವಿಧ ಧಾರ್ಮಿಕ ಕಾರ್ಯಕ್ರಮ
ಉಪ್ಪಿನಂಗಡಿ: ಇಲ್ಲಿನ ಶ್ರೀ ಕಾಳಿಕಾಂಬಾ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ 26ರಂದು ಶ್ರೀ ಗಣಪತಿ ಹೋಮ, ಶತರುದ್ರಾಭಿಷೇಕ ಮತ್ತು ಚಂಡಿಕಾ ಹೋಮ ನಡೆಯಲಿದೆ. ವೇದಮೂರ್ತಿ ನಾಗೇಶ್ ತಂತ್ರಿಗಳ ನೇತೃತ್ವದ ವೈಧಿಕ ತಂಡದೊಂದಿಗೆ ಈ ಎಲ್ಲಾ ಧಾರ್ಮಿಕ ಕಾರ್ಯಗಳು ನಡೆಯಲಿದ್ದು, ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆಯೂ ನಡೆಯಲಿದೆ ಎಂದು ಭಜನಾ ಮಂಡಳಿಯ ಅಧ್ಯಕ್ಷ ಕೆ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.