ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮುಖ್ಯಮಂತ್ರಿ ರಾಜಿನಾಮೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Mainashree
Updated On : 26 Nov 2013, 10:36 am

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿ ಅನುಸರಿಸುತ್ತಿದ್ದಾರೆ, ಉಗ್ರವಾದ ವಿರುದ್ಧ ಅಸಡ್ಡೆ ವಹಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಮುನಿರಾಜು ಮಾತನಾಡಿ, ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಹುಟ್ಟು ಹಾಕಿದ, ಭಯೋತ್ಪಾದಕ ಕೃತ್ಯ ನಡೆಸುತ್ತಿರುವ ಕರ್ನಾಟಕದವರೇ ಆಗಿರುವ ಯಾಸೀನ್ ಭಟ್ಕಳ ಯಾರೆಂದು ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ರಾಜ್ಯ ಹಿತ ಕಾಯಬೇಕಾದ ಮುಖ್ಯಮಂತ್ರಿ ಇಂಥ ಹೇಳಿಕೆ ನೀಡಿರುವುದು ನಾಚಿಕೆ ಸಂಗತಿ. ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳಲು ಯೋಗ್ಯತೆ ಇಲ್ಲ ಎಂದು ಆರೋಪಿಸಿದರು. ರಾಜೀನಾಮೆ ನೀಡದೇ ಇದ್ದಲ್ಲಿ ರಾಜ್ಯವ್ಯಾಪಿ ಹೋರಾಟ ನಡೆಸಲು ಯುವಮೋರ್ಚಾ ತೀರ್ಮಾನಿಸಿದೆ.
ಮುಖ್ಯಮಂತ್ರಿ ಶಾದಿಭಾಗ್ಯದಂತ ಯೋಜನೆ ಮೂಲ ಅಲ್ಪಸಂಖ್ಯಾತರ ಓಟ್ ಬ್ಯಾಂಕ್ ಮೇಲೆ ಕಣ್ಣಿರಿಸಿದ್ದಾರೆ. ಮುಖ್ಯಮಂತ್ರಿ ಕೇವಲ ಅಲ್ಪಸಂಖ್ಯಾತರ ಮುಖ್ಯಮಂತ್ರಿಯಾಗಿರದೆ ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಇವರು ಏನೂ ತಿಳಿಯದ ಶಾಲೆ ಮಕ್ಕಳಲ್ಲಿಯೂ ಜಾತಿಭೇದ ಹುಟ್ಟಿಸಲು ಅಹಿಂದ ಮಕ್ಕಳಿಗೆ ಮಾತ್ರ ಪ್ರವಾಸ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ ಎಂದು ಆರೋಪಿಸಿದರು.  ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಎಸ್.ವಿ.ರಾಘವೇಂದ್ರ, ಉಪಾಧ್ಯಕ್ಷ ಕಿಶೋರ್ ಕುಮಾರ್ ಪುತ್ತೂರು, ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ರಂಜನ್ ಗೌಡ, ಕೊಡಗು ಜಿಲ್ಲಾಧ್ಯಕ್ಷ ಭರತೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement