ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

'ಸನ್ನಡತೆ ಕೈದಿಗಳನ್ನು ಬಿಡುಗಡೆ ಮಾಡಿ'

Rashmi Kasaragodu
Updated On : 27 Nov 2013, 12:50 pm

ಮಂಗಳೂರು: ಕ್ಷಯರೋಗ, ಕ್ಯಾನ್ಸರ್, ಪಾರ್ಶ್ವವಾಯು ಇತ್ಯಾದಿ ಗಂಭೀರ ರೋಗದಿಂದ ನರಳುತ್ತಿರುವ 905 ಸನ್ನಡತೆ ಕೈದಿಗಳನ್ನು ಬಿಡುಗಡೆ ಮಾಡಿ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದದ್ದಾರೆ.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಮನೋಸ್ಥಿತಿಯ ರಾಜ್ಯಪಾಲರು ಬಿಜೆಪಿ ಸರ್ಕಾರದಲ್ಲಿ ಸನ್ನಡತೆ ಕೈದಿಗಳನ್ನು ಬಿಡುಗಡೆ ಮಾಡಲು ಅನುಮತಿ ನೀಡಿರಲಿಲ್ಲ. ಈ ಬಾರಿಯಾದರೂ ಬಿಡುಗಡೆ ಮಾಡಲಿ. ರಾಜಕೀಯ ಇಲ್ಲದೆ ಏನೂ ಮಾಡಲು ಸಾಧ್ಯವಿಲ್ಲ, ಬಾಬಾ ರಾಮದೇವ್, ಅಣ್ಣಾ ಹಜಾರೆ ಹೋರಾಟಗಳನ್ನು ರಾಜಕೀಯ ಮೂಲಕ ಹತ್ತಿಕ್ಕಲಾಗಿದೆ. ವ್ಯಕ್ತಿಗಳಿದ್ದರೂ ಹೋರಾಟ ಇಲ್ಲ. ರಾಜಕೀಯದಿಂದ ಏನು ಮಾಡಬಹುದು ಎಂಬುದನ್ನು ಸಾಧಿಸಿ ತೋರಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಹಿತೈಷಿಗಳು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಆಲೋಚಿಸಿ ನಿರ್ಧಾರ ಕೈಗೊಳ್ಳುತ್ತೇನೆ. ಆದರೆ ನರೇಂದ್ರ ಮೋದಿಗೆ ನಮ್ಮ ಬೆಂಬಲ ಸದಾ ಇದ್ದೇ ಇದೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement