ಬೀದಿ ನಾಟಕ ಮೂಲಕ ಕೇಂದ್ರ ಸರ್ಕಾರದ ಸಾಧನೆಯ ಅರಿವು
ಹೆಬ್ರಿ: ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆ ಮತ್ತು ಸಾಧನೆಗಳನ್ನು ಬೀದಿ ನಾಟಕದ ಮೂಲಕ ಜನತೆಗೆ ತಿಳಿಸಿ ಅರಿವು ಮೂಡಿಸುವ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ನೇತೃತ್ವದಲ್ಲಿ ಮಂಗಳವಾರ ನಡೆಯಿತು.
ಹೆಬ್ರಿ, ಮುದ್ರಾಡಿ, ಮುನಿಯಾಲು ಮತ್ತು ಕಡ್ತಲದಲ್ಲಿ ನಾಟಕ ಪ್ರದರ್ಶನದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಕಾಂಗ್ರೆಸ್ ಸರ್ಕಾರದ ವಿವಿಧ ಸಾಧನೆ ಮತ್ತು ಯೋಜನೆಗಳ ಮಾಹಿತಿ ನೀಡಿದರು.
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯ ಮುದ್ರಾಡಿ ಮಂಜುನಾಥ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಸನ್ನ ಬಲ್ಲಾಳ್, ಹೆಬ್ರಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತ ಲಕ್ಷ್ಮಣ್, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನವೀನ ಅಡ್ಯಂತಾಯ,ಹೆಬ್ರಿ ಕಾಂಗ್ರೆಸ್ ಅಧ್ಯಕ್ಷ ಜಯಕರ ಪೂಜಾರಿ, ವಕ್ತಾರ ಎಚ್.ಕೆ. ಶ್ರೀಧರ ಶೆಟ್ಟಿ, ಯುವ ಕಾಂಗ್ರೆಸ್ನ ಸುರೇಶ ಭಂಡಾರಿ, ಪ್ರಮುಖರಾದ ಸುರೇಶ ಶೆಟ್ಟಿ ಗಾಯತ್ರಿ ಆಚಾರ್ಯ, ಸುಮಿತ್ರಾ ಹೆಗ್ಡೆ, ಪಂಚಾಯಿತಿ ಸದಸ್ಯೆ ಸುರೇಖಾ ಶೆಟ್ಟಿ ಇದ್ದರು.