ಚರ್ಚ್ ಗೋಡೆ ಪ್ರತಿಮೆಗೆ ಬಾಟಲಿ ಎಸೆದು ಹಾನಿ
ಪುತ್ತೂರು: ಅಕ್ರಮ ಬಿದಿರು ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿದ ಅರಣ್ಯ ಇಲಾಖೆಯ ಅಧಿಕಾರಿಗಳು ಲಾರಿಯೊಂದರ ಸಹಿತ ಸುಮಾರು ರು. 3.5 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ವರ್ತಮಾನದ ಮೇರೆಗೆ ಪುತ್ತೂರು ತಾಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಪೊರಂಕಾಜೆ ಎಂಬಲ್ಲಿ ಅಕ್ರಮವಾಗಿ ಬಿದಿರು ಕಡಿದು ಲಾರಿಯಲ್ಲಿ ತುಂಬಿಸಿ ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆ ವಾಹನ ಸಮೇತ ಮಾಲನ್ನು ಮುಟ್ಟುಗೋಲು ಹಾಕಿ ಕೇಸು ದಾಖಲಿಸಿ ಕೊಂಡಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ಕಾರ್ಯಾಚರಣೆಯಲ್ಲಿ ಕೈಲ ಶಾಖಾ ಉಪವಲಯ ಅರಣ್ಯ ಅಧಿಕಾರಿ ಶಿವಾನಂದ ಆಚಾರ್ಯ, ಅರಣ್ಯ ರಕ್ಷಕರಾದ ಗಿರೀಶ್ ಎಸ್.ಪಿ, ಕಮಲಾಕ್ಷ ಶೆಟ್ಟಿ, ಹೊನ್ನಪ್ಪ ಮತ್ತು ಪದ್ಮನಾಭ ಪಾಲ್ಗೊಂಡಿದ್ದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಓ. ಪಾಲಯ್ಯ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಬ್ಬಾಸ್ ಎ.ಎಸ್. ಮಾರ್ಗದರ್ಶನದಲ್ಲಿ ಪುತ್ತೂರು ವಲಯ ಅರಣ್ಯ ಅಧಿಕಾರಿ ಪಿ. ಶ್ರೀಧರ್ ಮುಂದಿನ ತನಿಖೆ ನಡೆಸುತ್ತಿದ್ದಾರೆ.