ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಅವಹೇಳನಕಾರಿ ಹೇಳಿಕೆ ಖಂಡನೀಯ

Lingaraj Badiger
Updated On : 16 Oct 2013, 12:13 pm

ಬೆಳ್ತಂಗಡಿ: ಕೊಲೆ ಹಾಗೂ ಅತ್ಯಾಚಾರ ಪ್ರಕರಣದ ನೆಪದಲ್ಲಿ ಲಕ್ಷಾಂತರ ಭಕ್ತರ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಕುರಿತು ಅವಮಾನಕಾರಿಯಾಗಿ ಪ್ರತಿಕ್ರಿಯಿಸುವುದು ತೀರಾ ವಿಷಾದನೀಯ ಹಾಗೂ ಖಂಡನೀಯ ಎಂದು ಸಿಯೋನ್ ಆಶ್ರಮ ಟ್ರಸ್ಟ್ ಗಿಂಡಿಬಾಗಿಲಿನ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ. ಪೌಲೋಸ್ ತಿಳಿಸಿದ್ದಾರೆ.
ಎಂಟು ಶತಮಾನಗಳ ಹಿನ್ನೆಲೆಯಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಈಗಿನ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ ನಂತರ ಜನಪರ ಕಾರ್ಯಗಳ ಮೂಲಕ ಜಾತಿ, ಮತ, ಧರ್ಮಗಳ ಭೇದವಿಲ್ಲದೆ ಸಮಾಜಮುಖಿಯಾಗಿದೆ.
ಇದನ್ನು ಸಹಿಸದ ದುಷ್ಟ ಶಕ್ತಿಗಳು ಹೂಡಿದ ಷಡ್ಯಂತ್ರದ ಫಲವೇ ಅಪಪ್ರಚಾರವಾಗಿದೆ.
ಕೊಲೆ, ಅತ್ಯಾಚಾರ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸುವುದನ್ನು ನಾವು ಯಾವತ್ತೂ ವಿರೋಧಿಸುವುದಿಲ್ಲ. ಆದರೆ ಅದರ ಹೆಸರಿನಲ್ಲಿ ಧರ್ಮಾಧಿಕಾರಿಗಳು ಹಾಗೂ ಕ್ಷೇತ್ರದ ಹೆಸರು ಕೆಡಿಸುವುದನ್ನು ನಾವು ವಿರೋಧಿಸುತ್ತೇವೆ.
ಭಕ್ತರ ಭಾವನಗೆ ಧಕ್ಕೆಯಾಗುವ ದುಸ್ಸಾಹಸಕ್ಕೆ ಯಾರೂ ಕೈ ಹಾಕಬಾರದು. ಈ ರೀತಿ ದುಸ್ಸಾಹಸಕ್ಕೆ ಯಾರು ಮುಂದುವರಿಯುತ್ತಾರೋ ಅವರ ಮೇಲೆ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕಾಗಿ ಸರಕಾರವನ್ನು ಒತ್ತಾಯಿಸುತ್ತೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದುಗ್ಗಣ್ಣ ಸಾವಂತರಿಂದ ಖಂಡನೆ
ಮೂಲ್ಕಿ: ಬೆಳ್ತಂಗಡಿಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಚರ್ಚೆಗಳು ನಡೆಯುತ್ತಿದ್ದು ಸೌಜನ್ಯ ಕೊಲೆ ಹಂತಕರು ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಜತೆಗೆ ಸಿಬಿಐ ತನಿಖೆ ಸ್ವಾಗತಾರ್ಹ. ಆದರೆ ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಕುಟುಂಬದ ಬಗ್ಗೆ ತೀರ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವುದು ಆಕ್ಷೇಪಾರ್ಹವಾಗಿದ್ದು ಸೌಜನ್ಯ ಕೊಲೆ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಮಾಡಲು ಕೆಲವರು ವ್ಯವಸ್ಥಿತ ಹುನ್ನಾರ ನಡೆಸುತ್ತಿರುವುದು ಖಂಡನಾರ್ಹ. ಸೌಜನ್ಯ ಕೊಲೆ ಪಾತಕಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮೂಲ್ಕಿ ಸೀಮೆ ಅರಸರಾದ ಎಂ. ದುಗ್ಗಣ್ಣ ಸಾವಂತರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement