ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ನಾಳೆಯಿಂದ ಮೈಸೂರು ವಿಭಾಗ ಹ್ಯಾಂಡ್‌ಬಾಲ್ ಪಂದ್ಯಾವಳಿ

Mainashree
Updated On : 18 Oct 2013, 11:19 am

ಮಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ಬಾಲಕ, ಬಾಲಕಿಯರ ಮೈಸೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ ಅ.19ರಿಂದ 21ರವರೆಗೆ ಬಿಇಎಂ ಶಾಲೆಯಲ್ಲಿ ನಡೆಯಲಿದೆ.
ಈ ಪಂದ್ಯಾಟದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ 32 ತಂಡಗಳು ಭಾಗವಹಿಸಲಿವೆ. ಕೂಟದಲ್ಲಿ 600 ಕ್ರೀಡಾಳುಗಳು ಭಾಗವಹಿಸುವರು ಎಂದು ಬಿಇಎಂ ವಿದ್ಯಾಸಂಸ್ಥೆ ಅಧ್ಯಕ್ಷ ವಾಲ್ಟರ್ ಜೆ.ಮಾಬೆನ್ ಹೇಳಿದರು.
ಅ.19ರಂದು ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀಗೋಕರ್ಣನಾಥೇಶ್ವರ ದೇವಸ್ಥಾನದಿಂದ ಬಿಇಎಂ ಪ್ರೌಢಶಾಲೆ ಕ್ರೀಡಾಂಗಣ ವರೆಗೆ ಕ್ರೀಡಾಪಟುಗಳಿಂದ ವಾದ್ಯಸಮೇತ ಪಥಸಂಚಲನ ನಡೆಯಲಿದೆ.
ಸಂಜೆ 5.30ಕ್ಕೆ ಮಂಗಳೂರು ದಕ್ಷಿಣ ಶಾಸಕ ಜೆ.ಆರ್.ಲೋಬೋ ಅಧ್ಯಕ್ಷತೆ ವಹಿಸುವರು. ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ಆರೋಗ್ಯ ಸಚಿವ ಯು.ಟಿ.ಖಾದರ್, ಶಾಸಕ ಅಭಯಚಂದ್ರ ಜೈನ್, ಮಾಜಿ ಮುಖ್ಯಮಂದ್ರಿ ಡಿ.ವಿ.ಸದಾನಂದ ಗೌಡ, ಸಂಸದ ನಳಿನ್‌ಕುಮಾರ್ ಕಟೀಲ್ ಭಾಗವಹಿಸುವರು. ಸಮಾರೋಪ ಅ.21ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಉಪನಿರ್ದೇಶಕ ಜಯಶೇಖರ್ ಮೊಸೆಸ್, ಮುಖ್ಯ ಶಿಕ್ಷಕ ಜಯಶಂಕರ್ ಪಿ., ಕೇಶವ ಕೆ.ಬಿ., ಯಶವಂತ ಮಾಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement