ಕಟೀಲು ಶ್ರೀದುರ್ಗಾ ಮಕ್ಕಳ ಮೇಳ ವಾರ್ಷಿಕ ಕಲಾಪರ್ವ ಸಮಾರೋಪ
ಮೂಲ್ಕಿ: ಕಟೀಲು ಶ್ರೀದುರ್ಗಾ ಮಕ್ಕಳ ಮೇಳದ ವಾರ್ಷಿಕ ಕಲಾಪರ್ವ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಟೀಲಿನ ರಥಬೀದಿಯಲ್ಲಿ ಜರುಗಿತು.
ರಾಜ್ಯ ಯುವಜನ ಮತ್ತು ಮೀನುಗಾರಿಕೆ ಸಚಿವ ಕೆ. ಅಭಯಚಂದ್ರ ಜೈನ್, ಕಟೀಲು ಮೇಳದ ಹಿರಿಯ ಕಲಾವಿದ ಜನಾರ್ದನ ಜೋಗಿ ಮಂಜೇಶ್ವರ ಅವರನ್ನು ಸನ್ಮಾನಿಸಿದರು ಹಾಗೂ ಯಕ್ಷಗಾನ ಅರ್ಥಧಾರಿ ಶ್ರೀಧರ್ ಡಿ.ಎಸ್. ಮತ್ತು ಕಲಾ ವಿಮರ್ಶಕ ಕೆ.ಎಲ್. ಕುಂಡಂತಾಯ ಅವರನ್ನು ಗೌರವಿಸಿದರು.
ಆನೆಗುಡ್ಡೆ ಶ್ರೀವಿನಾಯಕ ದೇವಳದ ಆಡಳಿತ ಮೊಕ್ತೇಸರ ಸೂರ್ಯನಾರಾಯಣ ಉಪಾಧ್ಯಾಯ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಕಲಾರಂಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟರಿಗೆ ಗುರುವಂದನೆ ಸಲ್ಲಿಸಲಾಯಿತು. ಯಕ್ಷಗಾನ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು ಹಾಗೂ ಯಕ್ಷಗಾನ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಮುಂಬೈನ ಜ್ಯೋತಿಷಿ ಪೆರ್ಣಂಕಿಲ ಹರಿದಾಸ್ ಭಟ್, ಕಟೀಲು ದೇವಳ ಆಡಳಿತಾಧಿಕಾರಿ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ, ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ ಆಸ್ರಣ್ಣ, ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ, ಕಟೀಲು ಮೇಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಮಕ್ಕಳ ಮೇಳದ ಅಧ್ಯಕ್ಷ ಹರಿನಾರಾಯಣ ದಾಸ ಆಸ್ರಣ್ಣ, ಮರವೂರು ಜಗದೀಶ್ ಶೆಟ್ಟಿ, ಲೀಲಾಕ್ಷ ಕರ್ಕೇರ, ಡಾ. ಪದ್ಮನಾಭ ಕಾಮತ್ ಮತ್ತಿತರರು ಇದ್ದರು.
ಸಮಾರಂಭದ ಬಳಿಕ ಕಟೀಲು ಶ್ರೀದುರ್ಗಾ ಮಕ್ಕಳ ಮೇಳದಿಂದ ನೂರನೇ ಪ್ರದರ್ಶನ 'ಪಂಚವಟಿ' ಯಕ್ಷಗಾನ ಪ್ರದರ್ಶನ ಪ್ರದರ್ಶಿಸಲ್ಪಟ್ಟಿತು.