ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಬಂಟ್ವಾಳ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಪಾಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಇಲ್ಲಿನ ಮರ್ಕಂಜ ನಿವಾಸಿ ಸೋಮಪ್ಪ ಪೂಜಾರಿ (60) ಅತ್ಮಹತ್ಯೆ ಮಾಡಿಕೊಂಡವರು. ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೃತರ ಮಗ ಪ್ರಶಾಂತ್ ಬಂಟ್ವಾಳ ಗಾಮಾಂತರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.