ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಧರ್ಮಸ್ಥಳ ತೇಜೋವಧೆ: ಇಂದು ಪ್ರತಿಭಟನಾ ಸಭೆ

Rashmi Kasaragodu
Updated On : 26 Oct 2013, 11:29 am

ಸುಳ್ಯ: ಸೌಜನ್ಯ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ವೀರೇಂದ್ರ ಹೆಗ್ಗಡೆ ಅವರ ತೇಜೋವಧೆ ಮಾಡುತ್ತಿರುವುದನ್ನು ವಿರೋಧಿಸಿ ಇಲ್ಲಿನ ಸಾರ್ವಜನಿಕ ಹಿತರಕ್ಷಣಾ ವೇದಿಕೆ ವತಿಯಿಂದ 26ರಂದು ಬೆಳಗ್ಗೆ 10ರಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ಮೆರವಣಿಗೆಯು ಸುಳ್ಯದ ಲಾಲ್ ಬಹದ್ದೂರ್ ಶಾಸ್ತ್ರಿ (ಜ್ಯೋತಿ) ವೃತ್ತದಿಂದ ನಡೆಯಲಿದ್ದು, ಶ್ರೀ ಚೆನ್ನಕೇಶವ ದೇವಸ್ಥಾನ ಮುಂಭಾಗದಿಂದ ಸಾಗಿ ಸುಳ್ಯ ತಾಲೂಕು ಕಚೇರಿ ಮುಂದೆ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಅಧ್ಯಕ್ಷ ಜಯರಾಮ ಹಾಡಿಕಲ್ಲು, ಸಂಚಾಲಕ ಎನ್.ಎ. ರಾಮಚಂದ್ರ ಹಾಗೂ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement