ಸಿಬಿಐಗೆ ಒಪ್ಪಿಸಲು ಜಯಕರ್ನಾಟಕ ಆಗ್ರಹ
ಪುತ್ತೂರು: ಸೌಜನ್ಯ ಕೊಲೆ ಪ್ರಕರಣವನ್ನು ಸರ್ಕಾರವು ತಕ್ಷಣವೇ ಸಿಬಿಐಗೆ ಒಪ್ಪಿಸುವ ಮೂಲಕ ಸಾರ್ವಜನಿಕ ವಲಯದಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಬೇಕು ಎಂದು ಜಯಕರ್ನಾಟಕ ಸಂಘಟನೆಯ ಕಾರ್ಯಾಧ್ಯಕ್ಷ ಜಗದೀಶ್ ನೆಲ್ಲಿಕಟ್ಟೆ ಆಗ್ರಹಿಸಿದ್ದಾರೆ. ಅವರು ಶುಕ್ರವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಜಯಕರ್ನಾಟಕ ಸಂಘಟನೆಯ ರಾಜ್ಯ ಸಮಿತಿ ಸದಸ್ಯರಾದ ಸೂರ್ಯನಾಥ ಆಳ್ವ, ಲೋಕೇಶ್ ಹೆಗ್ಡೆ ಮತ್ತು ಆಲ್ಬರ್ಟ್ ಕುಟಿನ್ಹೋ ಇದ್ದರು.