ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಸೌಜನ್ಯ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

Rashmi Kasaragodu
Updated On : 26 Oct 2013, 11:29 am

ಮಂಗಳೂರು: ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಗುರುವಾರ ಪ್ರತಿಭಟನೆ ನಡೆಸಿತು.
ಕೊಲೆ ನಡೆದು ಒಂದು ವರ್ಷ ಕಳೆದಿದ್ದರೂ, ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಆದ್ದರಿಂದ ನೈಜ ಆರೋಪಿಯನ್ನು ಬಂಧಿಸಲು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಪ್ರತಿಭಟನಕಾರರು ಆಗ್ರಹಿಸಿದರು.
ಹಂಪನಕಟ್ಟೆ ವಿಶ್ವವಿದ್ಯಾಲಯ ಮುಂಭಾಗದಿಂದ ಹೊರಟ ಪ್ರತಿಭಟನೆಯಲ್ಲಿ 350 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಶವಯಾತ್ರೆ, ನ್ಯಾಯತಕ್ಕಡಿ ಪ್ರದರ್ಶನದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದಿದ್ದು, ವಿದ್ಯಾರ್ಥಿಗಳ ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಜಿಲ್ಲಾಧಿಕಾರಿಗಳು ಸ್ವತಃ ಬಂದು ಮನವಿ ಸ್ವೀಕರಿಸುವಂತೆ ಪಟ್ಟು ಹಿಡಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದರು.
ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಮುಹಮ್ಮದ್ ಇಕ್ಬಾಲ್, ಜಿಲ್ಲಾಧ್ಯಕ್ಷ ಸನಾವುಲ್ಲಾ, ರಾಜ್ಯ ಸಮಿತಿ ಸದಸ್ಯರಾದ ತುಫೈಲ್, ತಫ್ಸಿರ್, ಯಾಸೀರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement