ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಡಾ. ಕೃಷ್ಣಯ್ಯ ಗೌಡಗೆ ವಿದಾಯ

Rashmi Kasaragodu
Updated On : 27 Oct 2013, 2:05 am

ಮಂಗಳೂರು: ಮೈಸೂರು ಪ್ರಾಂತ್ಯ ಸಹಕಾರಿ ಸಂಘಗಳ ಜಂಟಿ ನಿಬಂಧಕರಾದ ಡಾ.ಎಚ್.ಆರ್.ಕೃಷ್ಣಯ್ಯ ಗೌಡ ಅ.31ರಂದು ಸೇವೆಯಿಂದ ನಿವೃತ್ತರಾಗಲಿದ್ದು, ಅವರಿಗೆ ಎಸ್ಸಿಡಿಸಿಸಿ ಬ್ಯಾಂಕ್ ವತಿಯಿಂದ ಬುಧವಾರ ವಿದಾಯ ಸಮಾರಂಭ ಬ್ಯಾಂಕಿನ ಸಭಾಂಗಣದಲ್ಲಿ ಏರ್ಪಡಿಸಲಾಯಿತು.
ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಡಾ.ಕೃಷ್ಣಯ್ಯ ಗೌಡರಿಗೆ ಶಾಲು ಹೊದಿಸಿ ಹಾರ ಹಾಕಿ, ಫಲಪುಷ್ಪ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು. ಅವರು ಇಲಾಖೆಯಲ್ಲಿ ಪ್ರಾಮಾಣಿಕ, ದಕ್ಷ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಗಿರಿಜನರ ಅಭಿವೃದ್ಧಿ ಬಗ್ಗೆ ಅಧ್ಯಯನ ನಡೆಸಿ ಪಿಎಚ್ಡಿ ಪದವಿ ಪಡೆದುಕೊಂಡವರು. ಅವರ ನಿವೃತ್ತಿ ಜೀವನಕ್ಕೆ ಶುಭ ಕೋರಿದರು.
ಒತ್ತಡದಲ್ಲಿ ಕೆಲಸ ಮಾಡುತ್ತಿರುವಾಗ ವಿರೋಧ ಕಟ್ಟಿಕೊಂಡಿದ್ದೇನೆ. ಆದರೆ ಕರ್ತವ್ಯ ಪಾಲನೆ ನನ್ನ ಉದ್ದೇಶವಾಗಿತ್ತು. ರಾಜೇಂದ್ರ ಕುಮಾರ್ ಸಹಕಾರಿ ಕ್ಷೇತ್ರದ ದಕ್ಷ ನಾಯಕರಾಗಿದ್ದು, ಅವರ ಕಾರ್ಯವ್ಯಾಪ್ತಿಯಲ್ಲಿ ನಾನು ಪ್ರಾಮಾಣಿಕನಾಗಿ ಕರ್ತವ್ಯ ನಿರ್ವಹಿಸಿದ ತೃಪ್ತಿ ಇದೆ ಎಂದರು.
ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಜಿ.ಆರ್.ವಿಜಯ ಕುಮಾರ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಕಾಂತರಾಜು ಶುಭ ಹಾರೈಸಿದರು.
ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕ ಗೋಪಾಲಕೃಷ್ಣ ಭಟ್, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಪಿ.ಬಿ.ದಿವಾಕರ ರೈ, ಬಜ್ಪೆ ಸೇವಾ ಸಹಕಾರಿ ಸಂಘ ಅಧ್ಯಕ್ಷ ಮೋನಪ್ಪ ಶೆಟ್ಟಿ, ಹೆರ್ಗ ಸೇವಾ ಸಹಕಾರಿ ಸಂಘ ಅಧ್ಯಕ್ಷ ಜಯ ಕುಮಾರ್, ಬ್ಯಾಂಕಿನ ವಸೂಲಾತಿ ಅಧಿಕಾರಿ ಪರಮೇಶ್ಚಂದ್ರ ಜೈನ್, ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement