ಸಂಪ್ಯ: ಇಂದು ತಾಳಮದ್ದಲೆ
ಪುತ್ತೂರು: ಸಂಪ್ಯದ ಆನಂದಾಶ್ರಮ ಸೇವಾ ಟ್ರಸ್ಟ್ ಮತ್ತು ಬೊಳುವಾರು ಆಂಜನೇಯ ಯಕ್ಷಗಾನ ಕಲಾ ಸಂಘ ವತಿಯಿಂದ ಪುತ್ತೂರಿನ ಸಮಾಜ ಸೇವಕಿ ಡಾ.ಪಿ. ಗೌರಿ ಪೈ ಅಭಿನಂದನಾ ಕಾರ್ಯಕ್ರಮ ಹಾಗೂ ಯಕ್ಷಗಾನ ತಾಳಮದ್ದಲೆ 'ಪುರುಷಾತಿಕ್ರಮಣ' 27ರಂದು ಸಂಪ್ಯದ ಆನಂದಾಶ್ರಮದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಬೊಳುವಾರು ಆಂಜನೇಯ ಯಕ್ಷಗಾನ ಕಲಾ ಸಂಘದ ಗೌರವ ಅಧ್ಯಕ್ಷ ರಮಾನಂದ ನಾಯಕ್ ಬೊಳುವಾರು, ಅಧ್ಯಕ್ಷ ಭಾಸ್ಕರ ಬಾರ್ಯ, ಮಹಿಳಾ ಯಕ್ಷಗಾನ ಸಂಘದ ಅಧ್ಯಕ್ಷೆ ಪ್ರೇಮಲತಾ ಟಿ. ರಾವ್, ಸಾಂಸ್ಕೃತಿಕ ಕಲಾ ಕೇಂದ್ರದ ಅಧ್ಯಕ್ಷ ಚಿದಾನಂದ ಕಾಮತ್ ಕಾಸರಗೋಡು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.