ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ರ್ಯಾಗಿಂಗ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Vishwanath S
Updated On : 8 Sept 2013, 11:47 am

ಸುಳ್ಯ:  ಸುಳ್ಯದಲ್ಲಿ ಕೆಲವು ದಿನಗಳ ಹಿಂದೆ ನಡೆದ ರ್ಯಾಗಿಂಗ್ ಪ್ರಕರಣದಲ್ಲಿ ಕೇಸಿಗೊಳಗಾಗಿ ತಲೆಮರೆಸಿಕೊಂಡಿದ್ದ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ದೊರೆತಿದೆ.
 20 ರಂದು ರಾತ್ರಿ ಕೆ.ವಿ.ಜಿ. ಪಾಲಿಟೆಕ್ನಿಕ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಯಾದ ಪೃಥ್ವಿನ್ ಕೆ.ಎನ್. ಗೆ ನೀರು ತರಲು ಒತ್ತಡ ಹಾಕಿದ್ದು, ತರಲು ಒಪ್ಪದಿದ್ದಾಗ ಆತನ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಸುಮಾರು 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.
ಆರೋಪಿಗಳ ವಿರುದ್ಧ ಕರ್ನಾಟಕ ಎಜ್ಯುಕೇಶನ್ ಆಕ್ಟ್‌ನ ಹಾಗೂ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ನೋಂದಾಯಿಸಿಕೊಂಡು 3 ವಿದ್ಯಾರ್ಥಿಗಳನ್ನು ದಸ್ತಗಿರಿ ಮಾಡಲಾಗಿತ್ತು. ಆದರೆ, ಇನ್ನೂ ಕೆಲವು ವಿದ್ಯಾರ್ಥಿಗಳಿಗೆ ಮತ್ತೆ ಠಾಣೆಯಿಂದ ನೋಟಿಸ್ ನೀಡಿದ್ದರ ಪರಿಣಾಮ ಬಂಧನದ ಭೀತಿ ಉಂಟಾಗಿತ್ತು. ಆ ಕಾರಣ ಹಿರಿಯ ವಿದ್ಯಾರ್ಥಿಗಳಾದ ಸಚಿನ್, ಕಾರ್ತಿಕ್, ಗಣೇಶ್, ಪ್ರವೀಣ್ ಕುಮಾರ್ ಹಾಗೂ ಕಾರ್ತಿಕ್ ಕಾರ್ಯಪ್ಪ ಅವರು 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಪುತ್ತೂರು ಇವರ ಮುಂದೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು, ಅರ್ಜಿದಾರರ ಅರ್ಜಿ ಪುರಸ್ಕರಿಸಿ ನ್ಯಾಯಾಲಯವು ಎಲ್ಲಾ ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ಸುಳ್ಯದ ನ್ಯಾಯವಾದಿ ಎಂ. ವೆಂಕಪ್ಪ ಗೌಡ ವಾದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement