ತುಂತುರು ಮಳೆ
ಉಡುಪಿ/ಮಂಗಳೂರು: ಕರಾವಳಿಯಲ್ಲಿ ಕಳೆದ 2-3 ದಿನಗಳಿಂದ ತುಂತುರು ಮಳೆಯಾಗುತ್ತಿದೆ. ಉಡುಪಿಯಲ್ಲಿ ಗುರುವಾರ ಬೆಳಗ್ಗೆ ಹನಿ ಮಳೆ ಬಂದಿದ್ದು, ಮಧ್ಯಾಹ್ನ ಬಿಸಿಲಿನ ವಾತಾವರಣವಿತ್ತು. ಸಂಜೆ ಹೊತ್ತಿಗೆ ಮತ್ತೆ ತುಂತುರು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಗುರುವಾರ ಮುಂಜಾನೆವರೆಗೆ 24 ಗಂಟೆಗಳಲ್ಲಿ ಸರಾಸರಿ 10.95 ಮಿ.ಮೀ. ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ 19.26 ಮಿ.ಮೀ., ಕುಂದಾಪುರ ತಾಲೂಕಿನಲ್ಲಿ 1.2 ಮಿ.ಮೀ., ಕಾರ್ಕಳ ತಾಲೂಕಿನಲ್ಲಿ 12.4 ಮಿ.ಮೀ. ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲಾದ್ಯಂತ ದಟ್ಟ ಮೋಡ ಕವಿದ ವಾತಾವರಣವಿದ್ದು, ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಹಲೆವಡೆ ಸಂಜೆ ಸಣ್ಣ ಪ್ರಮಾಣದಲ್ಲಿ ಆರಂಭವಾದ ತುಂತುರು ಮಳೆ ರಾತ್ರಿ ವರೆಗೂ ಮುಂದುವರಿಯಿತು.