ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಯುವಜೋಡಿ ಪೊಲೀಸ್ ವಶಕ್ಕೆ

Mainashree
Updated On : 15 Sept 2013, 10:08 am

ಬಂಟ್ವಾಳ: ದೇವಸ್ಥಾನ ವಠಾರದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಯುವಜೋಡಿಯನ್ನು ಸ್ಥಳೀಯ ನಾಗರಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ರಾತ್ರಿ ಇಲ್ಲಿಗೆ ಸಮೀಪದ ಅಜ್ಜಿಬೆಟ್ಟು ಗ್ರಾಮದಲ್ಲಿ ನಡೆದಿದೆ. ಅಜ್ಜಿಬೆಟ್ಟು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸ್ಥಳೀಯ ಯುವಕನೊಬ್ಬ, ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವೇಣೂರಿನ ದಲಿತ ಯುವತಿಯೊಬ್ಬಳೊಂದಿಗೆ ಸಿಕ್ಕಿಬಿದ್ದಿದ್ದಾನೆ. ಆತ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಚುಡಾಯಿಸುತ್ತಿದ್ದ ಎಂದು ಸ್ಥಳೀಯರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ರಾತ್ರಿ ಇವರಿಬ್ಬರನ್ನು ನೋಡಿ ಅನುಮಾನಗೊಂಡ ಸ್ಥಳೀಯರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಕಾರಿನಲ್ಲಿ ಯುವಜೋಡಿ ಪರಾರಿಯಾಗಲು ಯತ್ನಿಸಿತು. ತಕ್ಷಣ ಅಕ್ರೋಶಗೊಂಡ ಸ್ಥಳೀಯರು ಅವರನ್ನು ಬೆನ್ನಟ್ಟಿ ಹಿಡಿದು ಪುಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಪೊಲೀಸರು ವಿಚಾರಣೆ ನಡೆಸಿ ಯುವತಿಯ ಮನೆಯವರನ್ನು ಕರೆಸಿ ಯುವತಿಗೆ ಎಚ್ಚರಿಕೆ ನೀಡಿ ಕಳುಹಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಈಗ ಎಲೆಕ್ಟ್ರಾನಿಕ್ ಯಂತ್ರಗಳಿರುವ ಕಾರಣ ಲೋಪ ದೋಷಗಳು ಉಂಟಾದರೆ ತಕ್ಷಣವೇ ಗ್ರಾಹಕರ ಗಮನಕ್ಕೆ ಬರುತ್ತದೆ. ಹಾಗಾಗಿ ನ್ಯಾಯ ಬೆಲೆ ಅಂಗಡಿ ಮಾಲೀಕರು ಸರ್ಕಾರದ ನಿಯಮಾನುಸಾರ ಆಹಾರ ಪದಾರ್ಥಗಳನ್ನು ಫಲಾನುಭವಿಗಳಿಗೆ ವಿತರಿಸಬೇಕು.
- ಕೆ.ಎಸ್.ಪುಟ್ಟಣ್ಣಯ್ಯ, ಶಾಸಕ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement