ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಭಾಗವತರನ್ನು ಮೀರಿಸುವ ಯತ್ನ ಬೇಡ: ನಳಿನ್

Mainashree
Updated On : 23 Sept 2013, 10:48 am

ಮಂಗಳೂರು: ಯಕ್ಷಗಾನದಲ್ಲಿ ಭಾಗವತರಿಗೆ ಅಧ್ಯಕ್ಷ ಸ್ಥಾನವಿದೆ. ಕಲಾವಿದರು ಅವರನ್ನು ಮೀರಿಸುವ ಪ್ರಯತ್ನ ಮಾಡುವುದು ಬೇಡ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರು ಪುರಭವನದಲ್ಲಿ ಭಾನುವಾರ ಕೆರೆಮನೆ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ವತಿಯಿಂದ ನಡೆದ 'ಶ್ರೀಮಯ ಯಕ್ಷತ್ರಿವೇಣಿ ಸನ್ಮಾನ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಪ್ರಾಧ್ಯಾಪಕಿ ಭುವನೇಶ್ವರಿ ಹೆಗಡೆ ಮಾತನಾಡಿ, ಮನಸ್ಸನ್ನು ಪ್ರಫುಲ್ಲಗೊಳಿಸುವ ಕಾರ್ಯಕ್ರಮಗಳು ಇಂದು ಕಮ್ಮಿಯಾಗಿದೆ. ಯಾವುದೇ ಕ್ಷೇತ್ರದಲ್ಲಿಯೂ ಕಲಾವಿದನಿಗೆ ಶಿಸ್ತು ಮುಖ್ಯ. ಇದು ಯಕ್ಷಗಾನದ ಭವಿಷ್ಯದ ಬೆಳಛವಣಿಗೆಗೆ ಪೂರಕವಾಗಲಿದೆ. ಕಲೆಯ ಬಗ್ಗೆ ಅಭಿಮಾನವಿದ್ದಾಗ ಮಾತ್ರ ಸಮೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.
ಅಗರಿ ಸನ್ಮಾನ: ಈ ಸಂದರ್ಭ, ಹಿರಿಯ ಭಾಗವತ ಅಗರಿ ರಘುರಾಮ ಭಾಗವತ ಅವರನ್ನು ಸನ್ಮಾನಿಸಲಾಯಿತು.
ಉದ್ಯಮಿ ಸಿ.ಟಿ. ಪೈ, ರತ್ನಾಕರ್ ಜೈನ್, ಶ್ರೀ ಮಂಗಳಾದೇವಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಮಾನಾಥ ಹೆಗ್ಡೆ, ಸಾಂಸ್ಕೃತಿಕ ಸಂಘಟಕ ಕೆ.ವಿ. ರಮಣ, ಇಡಗುಂಜಿ ಮೇಳದ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement