ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಸುದ್ದಿ ಸಂಕ್ಷೇಪ

Mainashree
Updated On : 23 Sept 2013, 10:49 am

ಇಂದು ಬೀಳ್ಕೊಡುಗೆ, ಸನ್ಮಾನ ಸಮಾರಂಭ
ಸುಬ್ರಹ್ಮಣ್ಯ: ಸುಳ್ಯ ತಾಲೂಕು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ರಾಜೀವಿ ರೈ ಅವರು ಕಳೆದ ಮೂವತ್ತು ವರ್ಷಗಳಿಂದ ಸಂಘದ ಅಭ್ಯುದಯದಲ್ಲಿ ಅಪ್ರತಿಮ ಕಾರ್ಯವನ್ನು ನೆರವೇರಿಸಿದ್ದಾರೆ. ಇದೀಗ ಸ್ವಯಂ ನಿವೃತ್ತಿ ಪಡೆದ ಇವರಿಗೆ ಸಂಘದ ವತಿಯಿಂದ ಸೆ.23ರಂದು ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವು ಕ್ಷೇತ್ರದ ವಲ್ಲೀಶ ಸಭಾಭವನದಲ್ಲಿ ಜರುಗಲಿದೆ ಎಂದು ಸುಳ್ಯ ತಾಲೂಕು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಸುಬ್ರಹ್ಮಣ್ಯದ ಅಧ್ಯಕ್ಷೆ ವಿಮಲಾ ರಂಗಯ್ಯ ತಿಳಿಸಿದ್ದಾರೆ. ಸುಬ್ರಹ್ಮಣ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಸಂಘ, ಹಾಲು ಉತ್ಪಾದಕರ ಸಹಕಾರಿ ಸಂಘ, ರಾಜಕೀಯ, ಜೇಸಿಸ್ ಹೀಗೆ ವಿವಿಧ ಕ್ಷೇತ್ರಗಳಲ್ಲಿ ದುಡಿದ ರಾಜೀವಿ ರೈ ಅವರನ್ನು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವ ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರಾಜೀವಿ ಅವರನ್ನು ಸನ್ಮಾನಿಸಲಿದ್ದಾರೆ. ಜಿಪಂ ಸದಸ್ಯ ದೇವರಾಜ್ ಕೆ.ಎಸ್ ಅಭಿನಂದನಾ ಭಾಷಣ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement