ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

27, 28ರಂದು ರಾಷ್ಟ್ರೀಯ ವಿಚಾರ ಸಂಕಿರಣ

Rashmi Kasaragodu
Updated On : 24 Sept 2013, 11:49 am

ಬೆಳ್ತಂಗಡಿ: ಸಂಶೋಧನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮುಂದಿನ ದಶಕದ ಸವಾಲುಗಳು ಎಂಬ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯವು 27 ಮತ್ತು 28 ರಂದು ಆಯೋಜಿಸಿದೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಾಜ್ಕಿರಣ್ ಬಲ್ಲಾಳ್ ತಿಳಿಸಿದರು. ಅವರು ಸೋಮವಾರ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಚಾರ ಸಂಕಿರಣದಲ್ಲಿ ಸಂಶೋಧನಾರ್ಥಿಗಳು, ಶಿಕ್ಷಣ ತಜ್ಞರು ಹಾಗೂ ಕೈಗಾರಿಕೋದ್ಯಮಿಗಳಿಗೆ ಸಮಾನ ವೇದಿಕೆಯನ್ನು ಕಲ್ಪಿಸುತ್ತಿದ್ದು ಸುಮಾರು 170 ಸಂಶೋಧನಾ ಪ್ರಬಂಧಗಳು ಪ್ರಕಟಗೊಳ್ಳಲಿವೆ. ನ್ಯಾನೋ ಟೆಕ್ನೋಲೊಜಿ, ನ್ಯಾನೋ ಮೆಡಿಸಿನ್, ಮೆಮ್ಸ್, ಅಪ್ಲಿಕೇಶನ್ ಮೊದಲಾದ ಆಧುನಿಕ ವಿಚಾರಗಳ ಬಗ್ಗೆ ಸಂಶೋಧನಾರ್ಥಗಳ ಲೇಖನಗಳು ವಿಷಯ ತಂತ್ರಜ್ಞರಿಂದ ಸಂಶೋಧಿಸಲ್ಪಟ್ಟು ಮಂಡನೆಯಾಗಲಿವೆ. ದೆಹಲಿ, ಮಧ್ಯಪ್ರದೇಶ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ವಿವಿಧ ಕಡೆಗಳಿಂದ ಸುಮಾರು 200ಕ್ಕೂ ಹೆಚ್ಚು ಸಂಶೋಧನಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು. 27ರಂದು ವಿಚಾರ ಸಂಕಿರಣವನ್ನು ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ರಿಜಿಸ್ಟಾರ್ ಡಾ.ಕೆ.ಇ. ಪ್ರಕಾಶ್ ಉದ್ಘಾಟಿಸಲಿದ್ದಾರೆ. ಭಾರತೀಯ ವಿಜ್ಞಾನ ಸಂಸ್ಥಾನದ ಡಾ. ನವಕಾಂತ ಭಟ್ ಪ್ರಬಂಧ ಸಂಕಲನ ಬಿಡುಗಡೆ ಹಾಗೂ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ. 28ರಂದು ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರೊ.ಸಿ.ವಿ. ಹುನಗುಂದ ಇರಲಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಯಶೋವರ್ಮ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಡಾ. ಅನಂತ ಪ್ರಸಾದ್, ಪ್ರೊ. ಸುಬ್ರಹ್ಮಣ್ಯ ಭಟ್, ಡಾ. ಗಿರೀಶ್ ಪೂರಕ ಮಾಹಿತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement